ಹಾವೇರಿ: ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಚಾಲನೆ ಸಿಕ್ಕಿದೆ. ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಲಾಯಿತು.ಬೆಳಗ್ಗೆ 7 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್‌ ಹೆಬ್ಬಾರ್ (Shivaram Hebbar) ಧ್ವಜಾರೋಹಣ ನೆರವೇರಿಸುವ ಮೂಲಕ ಸಾಹಿತ್ಯ ಉತ್ಸವಕ್ಕೆ ಚಾಲನೆ ನೀಡಿದರು. ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಬಿ. ಹಿರೇಮಠ ನಾಡ ಧ್ವಜದ ಧ್ವಜಾರೋಹಣ ನೆರವೇರಿಸಿದರು. ಇದನ್ನೂ ಓದಿ: ಸ್ನಾನ ಮಾಡಿ ದೇವಸ್ಥಾನಕ್ಕೆ ಬಂದಿಲ್ಲವೆಂದು ಮಹಿಳೆ ಮೇಲೆ ಹಲ್ಲೆ, ಜೀವ ಬೆದರಿಕೆಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಶಿವರಾಮ್‌ ಹೆಬ್ಬಾರ್, ನಾವು ಬಹಳ ಸಂತೋಷದಿಂದ ಇವತ್ತಿನ ಕಾರ್ಯಕ್ರಮದ ಧ್ವಜಾರೋಹಣ ಮಾಡಿದ್ದೇವೆ. ನಿಗದಿ ಮಾಡಿದ ಏಳು ಗಂಟೆ ಸಮಯಕ್ಕೆ ಧ್ವಜಾರೋಹಣ ಮಾಡಿದ್ದೇವೆ. ಈ ಹಿಂದೆ ಯಾವತ್ತೂ ಆಗದ ರೀತಿಯ ಸಾಹಿತ್ಯ ಸಮ್ಮೇಳನ ಇದಾಗಲಿದೆ. ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ತಪ್ಪು ಸಂದೇಶ ಹೋಗಬಾರದು. ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ಅವರೆ ಮೇಳದಲ್ಲಿ ಕೇಕ್ ಈ ಬಾರಿಯ ಸ್ಪೆಷಲ್ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಸೇರಿದಂತೆ ಪ್ರತಿಯೊಬ್ಬರ ಭಾಷಣಕ್ಕೂ ಸಮಯ ನಿಗದಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಸಮಯ ನಿಗದಿ ಸಾಹಿತಿಗಳಿಗೆ ಹೊರತು ರಾಜಕಾರಣಿಗಳಿಗಲ್ಲ. ಸಾಹಿತಿಗಳು ನಿಗದಿ ಮಾಡಿದ ಸಮಯದಲ್ಲಿ ವಿಚಾರ ಮಂಡನೆ ಮಾಡಲಿ ಎಂದು ತಿಳಿಸಿದರು.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


