ಬೆಂಗಳೂರು: ವಿಧಾನಸೌಧದಲ್ಲಿ (Vidhana Soudha) ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 10.50 ಲಕ್ಷ ರೂ.ಯನ್ನು (Money) ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ಸಂಜೆ ನಡೆದಿದೆ.ಬುಧವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ (PWD) ಸಹಾಯಕ ಎಂಜಿನಿಯರ್ ಒಬ್ಬ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದ. ಗೇಟ್‌ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಮಂಡ್ಯ ಮೂಲದ ಈ ವ್ಯಕ್ತಿಯಿಂದ ಬ್ಯಾಗ್‌ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ.ವ್ಯಕ್ತಿಯ ಬಳಿ ಹಣದ ಮೂಲಕ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಆತ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡಾ ದಾಖಲಾಗಿದೆ. ಇದನ್ನೂ ಓದಿ: ಬಿಎಂಟಿಸಿ ವಜ್ರ ಬಸ್ ಪ್ರಯಾಣಿಕರಿಗೆ ಶಾಕ್ – ದರ ಹೆಚ್ಚಳಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಈ ವ್ಯಕ್ತಿ ಇಷ್ಟು ಮೊತ್ತದ ಹಣವನ್ನು ವಿಧಾನಸೌಧಕ್ಕೆ ಏಕೆ ತೆಗೆದುಕೊಂಡು ಹೋಗುತ್ತಿದ್ದ ಎಂಬುವುದು ಇನ್ನೂ ದೃಢಪಟ್ಟಿಲ್ಲ. ಹಣದ ಮೂಲದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಸಿದ್ದು ನಾಯಿಮರಿ ಹೇಳಿಕೆ: ಸಿಎಂ ಸಾಫ್ಟ್ ನಡೆ – ಒಗ್ಗಟ್ಟಿಂದ ಮುಗಿಬಿದ್ದ ಬಿಜೆಪಿ ಟೀಮ್ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಮಂಡ್ಯ ಮೂಲದ ಪಿಡಬ್ಲ್ಯುಡಿ ಕಿರಿಯ ಎಂಜಿನಿಯರ್ ಜಗದೀಶ್ ಎಂಬವರು ವಿಧಾನಸೌಧದಲ್ಲಿ ಅನಧಿಕೃತ ಹಣ ಸಾಗಾಟ ಮಾಡುತ್ತಿದ್ದುದು ಕಂಡುಬಂದಿದೆ. ಜಗದೀಶ್ ಹಣದೊಂದಿಗೆ ಮಂಡ್ಯ ತೆರಳಬೇಕಿತ್ತು. ಅದಕ್ಕೂ ಮುನ್ನ ವಿಧಾನಸೌಧಕ್ಕೆ ಹಣ ಸಮೇತ ಒಳ ಹೋಗಲು ಬಂದಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಚೆಕ್ ಮಾಡಿದ್ದು, ಸೂಕ್ತ ದಾಖಲಾತಿ ತೋರಿಸದ ಹಿನ್ನೆಲೆ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜಗದೀಶ್‌ನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದಿದ್ದಾರೆ.ಇಷ್ಟು ದೊಡ್ಡ ಮೊತ್ತವನ್ನು ವಿಧಾನಸೌಧಕ್ಕೆ ತಂದಿದ್ದ ಉದ್ದೇಶ ಏನು? ಯಾರಿಗೆ ನೀಡಲು ಹಣವನ್ನು ತಂದಿದ್ದ ಎಂಬುವುದು ಸ್ಪಷ್ಟವಾಗಿಲ್ಲ. ಸದ್ಯ ಪೊಲೀಸರು ಪ್ರಕರಣವನ್ನು ಎನ್‌ಸಿಆರ್ ಮಾಡಿದ್ದು, ಕೋರ್ಟ್‌ಗೆ ಹಣ ಜಮಾವಣೆ ಮಾಡಿ ತನಿಖೆ ಪ್ರಾರಂಭಿಸಿದ್ದಾರೆ. ಯಾವ ವಿಚಾರಕ್ಕೆ ಹಣ ತಂದಿದ್ರು? ಯಾರಿಗೆ ಹಣ ತಲುಪಿಸಲಾಗುತ್ತಿತ್ತು ಎಂಬುದರ ಬಗ್ಗೆ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


