ಬೆಳಗಾವಿ: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ (Accident) ಆರು ಜನ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಈಗಾಗಲೇ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಪ್ರಕರಣದ ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದು ಹೇಳಿದರು.ದಶಪಥ ರಸ್ತೆ ಲೋಕಾರ್ಪಣೆ : ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆಯಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ, ತೀರ್ಮಾನಕ್ಕೆ ಬರಲಾಗುವುದು ಎಂದರು. ಇದನ್ನೂ ಓದಿ: ಸಿದ್ದು ನಾಯಿಮರಿ ಹೇಳಿಕೆ: ಸಿಎಂ ಸಾಫ್ಟ್ ನಡೆ – ಒಗ್ಗಟ್ಟಿಂದ ಮುಗಿಬಿದ್ದ ಬಿಜೆಪಿ ಟೀಮ್ಸ್ಯಾಂಟ್ರೋ‌ ರವಿ ಯಾರೂಂತ ಗೊತ್ತಿಲ್ಲ: ಸ್ಯಾಂಟ್ರೋ ರವಿಗೂ ಸಿಎಂ, ಸಚಿವರಿಗೂ ಸಂಪರ್ಕ ಇದೆ ಎಂಬ ಮಾಜಿ ಸಿಎಂ ಹೆಚ್‌ಡಿಕೆ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸ್ಯಾಂಟ್ರೋ ರವಿ ಯಾರು ಅಂತ ನನಗೆ ಗೊತ್ತಿಲ್ಲ. ಕುಮಾರಸ್ವಾಮಿ ಅವರೇ ಇದನ್ನು ಹೇಳಿದ್ದು, ಅವರ ಬಳಿ‌ ಯಾವ ಮಾಹಿತಿ ಇದೆಯೋ‌ ಕೊಡಲಿ, ಆಮೇಲೆ ನೋಡೋಣ ಎಂದು ಟಕ್ಕರ್ ನೀಡಿದರು. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ- ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ 6 ಭಕ್ತರು ಸಾವು
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


