ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಿನೇಶ್ ಗುಂಡೂರಾವ್ (Dinesh Gundu Rao) ಕೇಂದ್ರ ಸರ್ಕಾರದ (Government Of Inadia) ವಿರುದ್ಧ ಹರಿಹಾಯ್ದಿದ್ದಾರೆ.ಈ ಕುರಿತು ಸರಣಿ ಟ್ವೀಟ್ ಮೂಲಕ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಿಕ್ಸಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್- ಪ್ರೀತಿ ನಿರಾಕರಿಸಿದ್ರಿಂದ ಕೊಲೆಗೆ ನಿರ್ಧರಿಸಿದ್ದೆ ಎಂದ ಆರೋಪಿ2ಸಾಲ‌‌ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ.ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ?GDP ಕುಸಿದಿದೆ.ಅಭಿವೃದ್ಧಿ ಶೂನ್ಯವಾಗಿದೆ.ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ.#PMCares ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್‌ಗೆ ಹಣ ಬಳಕೆಯಾಗುತ್ತಿದೆಯೆ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023ಟ್ವೀಟ್‌ನಲ್ಲಿ ಏನಿದೆ?
ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ. ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ. ಯುಪಿಎ (UPA) ಆಡಳಿತದ ಅಂತ್ಯಕ್ಕೆ ಭಾರತದ ಸಾಲ 63,583 ಕೋಟಿ ಇತ್ತು. ಆದರೆ ಮೋದಿಯವರು ಕೇವಲ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ ಏರಿಸಿದ್ದಾರೆ. ಈ ಸಾಲ ಮಾಡಿರುವುದು ಯಾರ ಉದ್ಧಾರಕ್ಕೆ?3ಮನ್‌ಮೋಹನ್ ಸಿಂಗ್ ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತಿಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು.ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ.ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ.— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023ಸಾಲ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ. ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ? ಜಿಡಿಪಿ ಕುಸಿದಿದೆ. ಅಭಿವೃದ್ಧಿ ಶೂನ್ಯವಾಗಿದೆ. ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ. ಪಿಎಂ ಕೇರ್ ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್‌ಗೆ ಹಣ ಬಳಕೆಯಾಗುತ್ತಿದೆಯೇ?ಮನಮೋಹನ್ ಸಿಂಗ್ (Manmohan Singh) ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ (LPG) ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತೀ ಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು. ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ. ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ.4ಮೋದಿಯವರು ಕಾಂಗ್ರೆಸ್ ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು BJP ಭಕ್ತರು, ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ.ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತವೇ 76 ಲಕ್ಷ ಕೋಟಿ.‌ಆದರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ.ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023ಮೋದಿಯವರು ಕಾಂಗ್ರೆಸ್ (Congress) ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು ಬಿಜೆಪಿ ಭಕ್ತರು, ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ. ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತ 76 ಲಕ್ಷ ಕೋಟಿ. ಆದ್ರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ. ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ? ಇದನ್ನೂ ಓದಿ: ಮುತ್ತಿಟ್ಟು ಮದುವೆ ಎಂದ ಪವಿತ್ರಾ ಲೋಕೇಶ್ ವಿಡಿಯೋ ಅಸಲಿ ಅಲ್ಲ ಎನ್ನುವ ಗುಮಾನಿ5ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ.ಮೋದಿಯವರು‌ ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲು ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ.ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ.ಇನ್ನಾದರೂ BJP ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ.— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ. ಮೋದಿಯವರು ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲೂ ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ. ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ. ಇನ್ನಾದರೂ ಬಿಜೆಪಿ ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ ಎಂದು ತಿಳಿವಳಿಕೆ ನೀಡಿದ್ದಾರೆ.
Join our Whatsapp group by clicking the below link
https://chat.whatsapp.com/E6YVEDajTzH06LOh77r25kSign in to your account
Username or Email Address


Password

 Remember Me


