ಬೆಂಗಳೂರು:  ಫ್ರೀಡಂ ಪಾರ್ಕ್‌ನಲ್ಲಿ (Freedom park) ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (Karnataka State Primary School Teachers’ Association) ಪ್ರತಿಭಟನೆ ನಡೆಸಲಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರ ಜೊತೆ ಸಭೆ ನಡೆಸಿದರೂ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಇಂದು ಸಂಘಟನೆ ರಾಜ್ಯಾದ್ಯಂತ ಪ್ರತಿಭಟನೆಗೆ (Protest) ಕರೆ ನೀಡಿದೆ. ಈ ಪ್ರತಿಭಟನೆಯಿಂದ ಸರ್ಕಾರಿ ಶಾಲೆಯಲ್ಲಿ ತರಗತಿಗಳು ವ್ಯತ್ಯಯವಾಗುವ ಸಾಧ್ಯತೆಯಿದೆ.ಬೃಹತ್ ಪ್ರತಿಭನೆ ಅಂಗವಾಗಿ ಆ.1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಮತ್ತೆ ಜೋರಾದ ಭಿನ್ನಮತ – ‘ದೋಸ್ತಿ’ ಪಾದಯಾತ್ರೆಗೆ ಬಿಜೆಪಿ ರೆಬೆಲ್ಸ್ ಠಕ್ಕರ್?ಬೇಡಿಕೆ ಏನು?
ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ಈ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕುಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ  ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು. Sign in to your account
Username or Email Address


Password

 Remember Me


