ಬೆಳಗಾವಿ: ಇಲ್ಲಿನ ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ (KPTCL) ನೇಮಕಾತಿ ಪರೀಕ್ಷೆಯ ಅಕ್ರಮದಲ್ಲಿ ಭಾಗಿಯಾಗಿದ್ದವರಲ್ಲಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 45ಕ್ಕೆ ತಲುಪಿದೆ.ಗೋಕಾಕ್ ತಾಲೂಕು ಮರಡಿಮಠ ಗ್ರಾಮದ ವೈಷ್ಣವಿ ಸನದಿ (21), ಉಪ್ಪಾರಟ್ಟಿಯ ಸುಧಾರಾಣಿ ಅರಬಾಂವಿ (24), ತುಕ್ಕಾನಟ್ಟಿಯ ಐಶ್ವರ್ಯ ಬಾಗೆವಾಡಿ ಹಾಗೂ ಬಗರನಾಳದ ಗ್ರಾಮದ ಬಸವರಾಜ ಹಾವಡಿ (27) ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಇದನ್ನೂ ಓದಿ: ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧಬಂಧಿತರು ಕಳೆದ ಆಗಸ್ಟ್ 7 ರಂದು ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ (Electronic Device) ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದರು. ಇದೀಗ ನಾಲ್ವರನ್ನು ಬಂಧಿಸಿರುವ ಪೊಲೀಸರು (Police), ಎಲೆಕ್ಟ್ರಾನಿಕ್‌ ಡಿವೈಸ್‌, ಮೈಕ್ರೋಚಿಪ್, ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಗುರುವಾರ ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ ಗಡ್ಕರಿ – ಬಿಜೆಪಿ ನಾಯಕರ ನಡುವೆ ನಾಮಕರಣ ಜಟಾಪಟಿ
Sign in to your account
Username or Email Address


Password

 Remember Me


