ಬೆಂಗಳೂರು: ಬಿಪಿಎಲ್‌ ಪಡಿತರದಾರರಿಗೆ (BPL Card) ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ (Ration) ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್‌) ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲಾಗುವುದು. ಜನವರಿ 1ರಿಂದಲೇ ಈ ಆದೇಶ ಜಾರಿಗೊಂಡಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಲಾರಿ ಟೈರ್‌ ಸ್ಫೋಟಿಸಿ ಚಾಲಕ ಸ್ಥಳದಲ್ಲೇ ಸಾವುರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀತಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ಆದೇಶಿಸಿದೆ.ಚುನಾವಣೆ ಸಮೀಪದಲ್ಲಿರುವ ಹೊತ್ತಿನಲ್ಲೇ ಸರ್ಕಾರ ಈ ಆದೇಶ ಹೊರಡಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು‌ ಸಮಾವೇಶವೊಂದರಲ್ಲಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪಡಿತರದಾರರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ಸದ್ಯ ನೀಡುತ್ತಿರುವ ಪಡಿತರ ಜೊತೆಗೆ 1 ಕೆಜಿ ಹೆಚ್ಚುವರಿ ಅಕ್ಕಿ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ!
Sign in to your account
Username or Email Address


Password

 Remember Me


