ವಿಜಯಪುರ: ಸೋಮವಾರ ಅಸ್ತಂಗತರಾದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳ (Siddheswhara Swamiji) ಪಾರ್ಥೀವ ಶರೀರವನ್ನು ಆಶ್ರಮದಿಂದ ಸೈನಿಕ ಶಾಲೆಗೆ ತರಲಾಯಿತು. ಶ್ರೀಗಳ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳ್ಳಂಬೆಳಗ್ಗೆಯಿಂದಲೇ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡು ಆಗಮಿಸುತ್ತಿದೆ.ಆಶ್ರಮದಿಂದ ಸೈನಿಕ ಶಾಲೆ ಮೈದಾನಕ್ಕೆ ಶ್ರೀಗಳ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ತರಲಾಯಿತು. ಈ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಭಕ್ತರು, ಶ್ರೀಗಳಿಗೆ ದೂರದಿಂದಲೇ ಕೈಮುಗಿದು ಕಂಬನಿ ಮಿಡಿದರು. ಸೈನಿಕ ಶಾಲೆ ಮುಂಭಾಗದಲ್ಲಿ ವಚನ ಪಠಣ, ಮಂತ್ರ ಪಠಣ ಮಾಡಲಾಯಿತು. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ನಸುಕಿನ ಜಾವದಲ್ಲೇ ಸಹಸ್ರಾರು ಭಕ್ತರು ಆಗಮಿಸಿದ್ದಾರೆ. ಭಕ್ತರಿಗಾಗಿ ವಿಜಯಪುರ ಬಸ್ ನಿಲ್ದಾಣದಿಂದ ಸೈನಿಕ ಶಾಲೆಗೆ 25 ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 6 ಲಕ್ಷ ಭಕ್ತರಿಗೆ ಪ್ರಸಾದ, ನೀರು, ನೆರಳಿನ ವ್ಯವಸ್ಥೆ ಮಾಡಲಾಗಿದೆ. ಸರ್ಕಾರಿ ಗೌರವದಲ್ಲಿ ಸಿಎಂ ಬೊಮ್ಮಾಯಿ ಮತ್ತು ಸಂಪುಟ ಸಚಿವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.ಸೈನಿಕ ಶಾಲೆಯಲ್ಲಿ ಶ್ರೀಗಳಿಗೆ ತ್ರಿವರ್ಣ ಧ್ವಜ ಹೊದಿಸಿ, ಗಾಜಿನ ಮಂಟಪದಲ್ಲಿ ಪಾರ್ಥೀವ ಶರೀರವನ್ನಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗ್ಗೆಯೇ 30 ಸಾವಿರಕ್ಕೂ ಹೆಚ್ಚು ಭಕ್ತರು ಅಂತಿಮ ದರ್ಶನಕ್ಕೆ ಆಗಮಿಸಿದ್ದರು. ರಾಜ್ಯದ ಪ್ರಮುಖ ಮಠಗಳ ಮಠಾಧೀಶರು, ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಸಹ ಭಾಗವಹಿಸಿದ್ದಾರೆ. ಇದನ್ನೂ ಓದಿ: ಮಂಗಳವಾರ ವಿಜಯಪುರ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ
Sign in to your account
Username or Email Address


Password

 Remember Me


