ರಾಮನಗರ: ಸಂಸದ ಬಿ. ವೈ ರಾಘವೇಂದ್ರ (B.Y Raghavendra)ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದ್ದು, ಸಂಸದರು ಸಂತಾಪ ಸೂಚಿಸಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ (Prasanna Bhat) ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಶ್ರೀ ಪ್ರಸನ್ನ ಭಟ್ ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/IUiisohpxQ— B Y Raghavendra (@BYRBJP) January 2, 2023ಇವರು ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ (25) ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಸಂಜೆ ಈಜಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಸನ್ನ ಭಟ್ ಆರು ಜನರ ತಂಡ ಕನಕಪುರದ ಸ್ನೇಹಿತನ ಮನೆಗೆ ಬಂದಿದ್ದರು. ಅಂತೆಯೇ ಸಂಜೆ ಈಜಾಡಲು ಎಂದು ಮಾವತ್ತೂರು ಕೆರೆ ತೆರಳಿದ್ದರು. ಈಜಾಡುವ (Swimming) ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪತ್ನಿಯೊಂದಿಗೆ ಜಗಳ – ಕೋಪದ ಭರದಲ್ಲಿ ತನ್ನ ನವಜಾತ ಶಿಶುವನ್ನು ನೆಲಕ್ಕೆ ಎಸೆದಕೂಡಲೇ ವಿಷಯ ತಿಳಿದು ಕನಕಪುರ ಗಾಮಾಂತರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಲಗಿತ್ತು. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Sign in to your account
Username or Email Address


Password

 Remember Me


