ರಾಮನಗರ: ಪ್ರಭಾವಿ ರಾಜಕಾರಣಿ ಸೇರಿ 6 ಮಂದಿ ಉದ್ಯಮಿಗಳ (Businessman) ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು (Bengaluru) ದಕ್ಷಿಣ ತಾಲೂಕಿನ ನೆಟ್ಟಗೆರೆ ಬಳಿ ನಡೆದಿದೆ.ಬೆಂಗಳೂರಿನ ಎಚ್‌ಎಸ್ಆರ್ ಲೇಔಟ್ ಬಳಿಯ ಅಮಲೀಪುರದ ನಿವಾಸಿ ಪ್ರದೀಪ್ (47) ಆತ್ಮಹತ್ಯೆಗೆ ಶರಣಾಗಿರುವ ಉದ್ಯಮಿ. ಸಾವಿಗೂ ಮುನ್ನ ರಾಜಕಾರಣಿಯ (Politician) ಹೆಸರು, ಉದ್ಯಮಿಗಳ ಹೆಸರನ್ನು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.ಹೊಸ ವರ್ಷಾಚರಣೆ ಸಲುವಾಗಿ ಕುಟುಂಬ ಸಮೇತ ರಾಮನಗರದ ಕಗ್ಗಲೀಪುರ ಸಮೀಪವಿರುವ ನೆಟ್ಟಗೆರೆ ಬಳಿ ಇರುವ ರೆಸಾರ್ಟ್‌ಗೆ ಕುಟುಂಬ ಸಮೇತ ಬಂದಿದ್ದ ಪ್ರದೀಪ್ ರಾತ್ರಿ ಪಾರ್ಟಿ ಮಾಡಿ, ಬೆಳಗ್ಗೆ ಶಿರಾಗೆ ಹೋಗಬೇಕು ಎಂದು ಹೇಳಿ ರೆಸಾರ್ಟ್‌ನಿಂದ ಭಾನುವಾರ ಬೆಳಗ್ಗೆ ಒಬ್ಬರೆ ಬೆಂಗಳೂರಿನಲ್ಲಿನ ತಮ್ಮ ನಿವಾಸಕ್ಕೆ ಹೋಗಿ ಡೆತ್ ನೋಟ್ ಬರೆದಿದ್ದಾನೆ. ಬಳಿಕ ರೆಸಾರ್ಟ್‌ಗೆ ವಾಪಸ್ಸು ಬರುವಾಗ ಕಾರಿನಲ್ಲೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಡೆತ್ ನೋಟ್‌ನಲ್ಲಿ ಕಾರಣ ಉಲ್ಲೇಖಿಸಿರುವ ಪ್ರದೀಪ್, ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು 5 ಮಂದಿ ನನ್ನ ಬಳಿ ಮಾತನಾಡಿ, ಒಂದೂವರೆ ಕೋಟಿ ಹಣ ಪಡೆದುಕೊಂಡಿದ್ದರು. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಮನೆ ಮಾರಿದ್ದೆ. ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ, ಪಾಲುದಾರಿಕೆ ಹೆಸರಿನಲ್ಲಿ ನನಗೆ ಮೋಸ ಮಾಡಿದ್ದಾರೆ. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಈ ನಡುವೆ ರಾಜಕಾರಣಿಯೊಬ್ಬರು ರಾಜಿ ಮಾಡುವ ಪ್ರಯತ್ನ ಮಾಡಿದ್ದರು. ಆದರೂ ನನಗೆ ಪೂರ್ಣ ಹಣ ನೀಡದೇ ಮೋಸ ಮಾಡಲಾಗಿದೆ‌. ಆಂಧ್ರದ ಮಾಜಿ ಸಿಎಂ ರ‍್ಯಾಲಿ ವೇಳೆ ಕಾಲ್ತುಳಿತಕ್ಕೆ ಮತ್ತೆ 3 ಬಲಿಈ ಬಗ್ಗೆ ಕೇಳಿದರೆ ಆ ರಾಜಕಾರಣಿಯವರು ಸಹ ನನಗೆ ಸಹಾಯ ಮಾಡಿಲ್ಲ. ಹಾಗಾಗಿ ನನ್ನ ಸಾವಿಗೆ ಈ 6 ಮಂದಿ ಕಾರಣ, ಎಲ್ಲರಿಗೂ ಶಿಕ್ಷೆ ಆಗಬೇಕು ಎಂದು ಪ್ರದೀಪ್ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮನಗರ ಎಸ್ಪಿ ಸಂತೋಷ್ ಬಾಬು ಕೂಡಾ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಲಾರ ಸಂಸದ ಮುನಿಸ್ವಾಮಿಗೆ ಮುತ್ತು ಕೊಟ್ಟ ಮಾಜಿ ಸಚಿವ ವರ್ತೂರು ಪ್ರಕಾಶ್
Sign in to your account
Username or Email Address


Password

 Remember Me


