ಚಿಕ್ಕಬಳ್ಳಾಪುರ: ಹೊಸ ವರ್ಷದ ಸಂಭ್ರಮಾಚರಣೆಗೆ(New Year Celebration) ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ(Nandi Hills) ಪ್ರವಾಸಿಗರ ದಂಡೇ ಆಗಮಿಸಿದೆ.ಬೆಳ್ಳಂಬೆಳಗ್ಗೆ ಕಾರು ಹಾಗೂ ಬೈಕ್ ಗಳಲ್ಲಿ ನಾ ಮುಂದು ತಾ ಮುಂದು ಅಂತ ಪ್ರವಾಸಿಗರು ನಂದಿಬೆಟ್ಟದತ್ತ ಲಗ್ಗೆಯಿಟ್ಟಿದ್ದಾರೆ. ಹೊಸ ವರ್ಷದ ಮೊದಲ ದಿನ ನಂದಿಬೆಟ್ಟದಿಂದಲೇ ಸೂರ್ಯೋದಯದ ಸವಿಯನ್ನು ಸವಿಯಲು ಸಾವಿರಾರು ಮಂದಿ ನಂದಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಹಾಯ್‌ 2023.. ಹೊಸ ವರ್ಷ ನಿನಗೆ ಸುಸ್ವಾಗತಶನಿವಾರ ಸಂಜೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಮಧ್ಯರಾತ್ರಿಯೇ ನಂದಿಬೆಟ್ಟದ ಚೆಕ್ ಪೋಸ್ಟ್ ಬಳಿ ಸಾವಿರಾರು ಮಂದಿ ಜಮಾಯಿಸಿದ್ದರು.ಬೆಳಗ್ಗೆ 6 ಗಂಟೆಗೆ ಪೊಲೀಸರು ಚೆಕ್ ಪೋಸ್ಟ್ ತೆರೆಯುತ್ತಿದ್ದಂತೆ ಜನ ನಾ ಮುಂದು ತಾ ಮುಂದು ಅಂತ ನಂದಿಬೆಟ್ಟದತ್ತ ಮುನ್ನುಗ್ಗಿದ್ದಾರೆ.
Sign in to your account
Username or Email Address


Password

 Remember Me


