ಬೆಂಗಳೂರು: ಗಾಂಜಾ ಸೇವಿಸಿ ಗಲಾಟೆ ಮಾಡುತ್ತಿದ್ದ ಕಿಡಿಗೇಡಿಗಳನ್ನು ಬೆಂಗಳೂರಿನ (Bengaluru) ಕಬ್ಬನ್ ಪಾರ್ಕ್ ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.ಹೊಸ ವರ್ಷದ (New Year) ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ರಂಗು ರಂಗಾಗಿದೆ. ಎಂಜಿ ರೋಡ್, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರೋಡ್‍ಗಳಲ್ಲಿ ಕಿಕ್ಕಿರಿದು ಜನರು ಸೇರಿದ್ದು, 2023ರನ್ನು ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ಈ ವೇಳೆ ಬ್ರಿಗೇಡ್ ರೋಡ್ (Brigade Road) ಎಂಟ್ರಿಯಲ್ಲಿ ಕೆಲವರು ಗಾಂಜಾ ಸೇದುತ್ತಿದ್ದರು. ಅಷ್ಟೇ ಅಲ್ಲದೇ ಗಾಂಜಾ ಮತ್ತಿನಲ್ಲಿ ಗಲಾಟೆ ನಡೆಸಿದ್ದಾರೆ. ಇದನ್ನೂ ಓದಿ: ಚರ್ಚ್ ಸ್ಟ್ರೀಟ್‌ನಲ್ಲಿ ಮಾರಾಮಾರಿ – ಲವರ್ ಮುಟ್ಟಿದ್ದಕ್ಕೆ ಬಿತ್ತು ಗೂಸಾಘಟನೆಗೆ ಸಂಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ (Police Station) ಪೊಲೀಸರು ಗಾಂಜಾ ಸೇವಿಸಿ ಗಲಾಟೆ ಮಾಡುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಬಂದ್ – ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ವಾಹನ ಸವಾರರು
Sign in to your account
Username or Email Address


Password

 Remember Me


