ಚಿಕ್ಕೋಡಿ(ಬೆಳಗಾವಿ): ಮಾಜಿ ಶಾಸಕ, ಜೆಡಿಎಸ್ (JDS) ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತ (Car Accident) ಕ್ಕೀಡಾಗಿದೆ.ವಿಜಯಪುರದಿಂದ ಚಿಕ್ಕೋಡಿ (Chikkodi) ತಾಲೂಕಿನ ಮಾಂಜರಿ ಗ್ರಾಮಕ್ಕೆ ಆಗಮಿಸುತ್ತಿರುವಾಗ ಬೆಳಗಾವಿಯ ಅಥಣಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ನಡೆದಿದೆ. ಇದನ್ನೂ ಓದಿ: ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್‌ ಬಿಚ್ಚಿಟ್ಟ ಸತ್ಯಮಾಂಜರಿ ಗ್ರಾಮ ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ (Kallappa Magennavar) ಸ್ವಗ್ರಾಮವಾಗಿದೆ. ಅಥಣಿಯಿಂದ ವಿಜಯಪುರದತ್ತ ಸಾಗುತ್ತಿದ್ದ ಲಾರಿ (Lorry) ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ ಮಗೆಣ್ಣವರ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ ಇನ್ನುಳಿದ ಆರು ಜನರಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Sign in to your account
Username or Email Address


Password

 Remember Me


