ಬೆಂಗಳೂರು: ನಿಂತಿದ್ದ ಬಸ್ (Bus) ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್‍ಗಳು ಬೆಂಕಿಗಾಹುತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಮೈಸೂರು ರಸ್ತೆ (Mysuru Road) ಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಈ ದುರ್ಘಟನೆ ನಡೆದಿದೆ. ಪಾರ್ಕ್ ಮಾಡಿದ್ದ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡು ದರಂತ ಸಂಭವಿಸಿದೆ. ಇದನ್ನೂ ಓದಿ: ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಸಂಚರಿಸುತ್ತಿದ್ದ ಕಾರು ಅಪಘಾತಬಸ್‍ಗಳು SRS ಟ್ರಾವೆಲ್ಸ್ ಗೆ ಸೇರಿದ್ದಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ.
Sign in to your account
Username or Email Address


Password

 Remember Me


