ಮೈಸೂರು: ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಅವರಿದ್ದ ಕಾರು ಅಪಘಾತಕ್ಕೀಡಾಗಿರುವ (Car Accident) ಘಟನೆ ಮೈಸೂರು (Mysuru) ತಾಲೂಕಿನ ಕಡಕೊಳ ಬಳಿ ನಡೆದಿದೆ.ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬೇಲಿ ಹಾರಿ ಜನರ ಮೇಲೆ ಚಿರತೆ ದಾಳಿ – 25 ಗಂಟೆಯಲ್ಲಿ 15 ಜನರಿಗೆ ಗಾಯಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ಮೋದಿ (70), ಪ್ರಹ್ಲಾದ್ ಮೋದಿ ಪುತ್ರ ಮೆಹೂಲ್ ಪ್ರಹ್ಲಾದ್ ಮೋದಿ (40), ಸೊಸೆ ಜಿಂದಾಲ್ ಮೋದಿ (35) ಹಾಗೂ ಮೊಮ್ಮಗ ಮಾಸ್ಟರ್ ಮೆಹತ್ ಮೆಹೋಲ್‌ ಮೋದಿ (06) ಹಾಗೂ ಕಾರು ಚಾಲಕ ಸತ್ಯನಾರಾಯಣ ಚಾಲಕ (46) ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಬೇಲಿ ಹಾರಿ ಜನರ ಮೇಲೆ ಚಿರತೆ ದಾಳಿ – 25 ಗಂಟೆಯಲ್ಲಿ 15 ಜನರಿಗೆ ಗಾಯಅಪಘಾತದಲ್ಲಿ ಮೋದಿ ಸಹೋದರನ ಮೊಮ್ಮಗನ ಕಾಲಿಗೆ ಹಾಗೂ ಪ್ರಹ್ಲಾದ್‌ ಮೋದಿಗೆ ಮುಖದ ಬಳಿ ಗಾಯವಾಗಿದೆ. ಉಳಿದ ಯಾರಿಗೂ ದೊಡ್ಡ ಪ್ರಮಾಣದಲ್ಲಿ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಜೆಎಸ್‌ಎಸ್‌ ಆಸ್ಪತ್ರೆಯ ವೈದ್ಯ ಡಾ.ಮಧು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.
ಸಿಎಂ ಕಚೇರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳದಲ್ಲೇ ಇದ್ದು ಸನ್ನಿವೇಶ ಗಮನಿಸುತ್ತಿದ್ದಾರೆ. ವೈದ್ಯರಿಂದ ಚಿಕಿತ್ಸೆ ನಡೆಯುತ್ತಿದೆ.
Sign in to your account
Username or Email Address


Password

 Remember Me


