ಬೆಂಗಳೂರು: ಡಿಸೆಂಬರ್‌ ತಿಂಗಳಿನಲ್ಲಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIAL) ಆಗಮಿಸಿದ 12 ಮಂದಿಗೆ ಕೊರೊನಾ ಸೋಂಕು (Corona Virus) ದೃಢಪಟ್ಟಿದೆ.ಸದ್ಯ 12 ಮಂದಿಯೂ ಆರೋಗ್ಯವಾಗಿದ್ದಾರೆ. ಒಟ್ಟು ನಾಲ್ಕು ಜನ ಅಂತರಾಷ್ಟ್ರೀಯ ಪ್ರಯಾಣಿಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಇನ್ನುಳಿದವರು ಹೋಂ ಐಸೋಲೇಷನ್‌ನಲ್ಲಿದ್ದಾರೆ.  ಇದನ್ನೂ ಓದಿ: ಯಾರೂ ಪ್ಯಾನಿಕ್ ಆಗ್ಬೇಡಿ, ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧ ಇರಲ್ಲ: ಆರ್.ಅಶೋಕ್ಹಾಂಕಾಂಗ್, ಅಮೇರಿಕ, ಥಾಯ್ಲೆಂಡ್‌, ಆಸ್ಟ್ರೇಲಿಯಾ, ಸಿಂಗಾಪುರದಿಂದ ಬಂದ ಪ್ರಯಾಣಿಕರಲ್ಲಿ ಸೋಂಕು ಕಾಣಿಸಿದೆ. ಇವರಿಗೆ ಬಂದಿರುವ ತಳಿ  ಯಾವುದು ಎಂದು ತಿಳಿಯಲು ಗಂಟಲ ದ್ರವದ ಮಾದರಿಯನ್ನು ಜೀನೋಮ್‌ ಸೀಕ್ವೆನ್ಸ್‌ ಲ್ಯಾಬ್‌ಗೆ ಕಳುಹಿಸಲಾಗಿದೆ.ಪ್ರಸ್ತುತ ಈಗ ಪ್ರತಿ ದಿನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ  ರ್‍ಯಾಂಡಮ್‌ ಆಗಿ 100-150 ಮಂದಿಗೆ ಕೊರೊನಾ ಟೆಸ್ಟ್‌ ಮಾಡಲಾಗುತ್ತಿದೆ.Live Tv
[brid partner=56869869 player=32851 video=960834 autoplay=true]
Sign in to your account
Username or Email Address


Password

 Remember Me


