ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಡಬಲ್ ಮರ್ಡರ್ (Murder) ಆಗಿರುವ ಘಟನೆ ತಾಲೂಕಿನ ಹೊರವಲಯದ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಬೆಳಗಾವಿ (Belagavi) ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್ (22) ಹಾಗೂ ಗಿರೀಶ್ ನಾಗಣ್ಣವರ (22) ಹತ್ಯೆಯಾಗಿದೆ. ನಿನ್ನೆ ಶಿಂದೋಳಿ ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಆಯೋಜನೆ ಮಾಡಲಾಗಿತ್ತು. ಈ ವೇಳೆ ಅಪರಿಚಿತ ವ್ಯಕ್ತಿಗಳು ಮೈದಾನದಲ್ಲಿ ವಾಹನ ನುಗ್ಗಿಸಿದ್ದಾರೆ. ಇದಕ್ಕೆ ಕ್ರಿಕೆಟ್ ಆಡುತ್ತಿದ್ದ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸಿಟ್ಟಾದ ಅಪರಿಚಿತ ವಾಹನ ಚಾಲಕ ವಾಹನದಿಂದ ಕೆಳಗಿಳಿದು ಇಬ್ಬರಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಜಲೀಲ್‌ ಹತ್ಯೆ ಕೇಸ್‌ – ಇಬ್ಬರು ಮಹಿಳೆಯರ ವಿಚಾರಣೆ, ಗಾಂಜಾ ಮಾಫಿಯಾದ ವಾಸನೆರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕರ ಮೃತದೇಹಗಳನ್ನು ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾಡಿ, ಎಸಿಪಿ ನಾರಾಯಣ ಭರಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾಸನ ಜೆಡಿಎಸ್ ಕಾರ್ಯಕರ್ತರಿಗೆ ಮೈಸೂರಿನಲ್ಲಿ ಭರ್ಜರಿ ಬಾಡೂಟಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೆಎಸ್‌ಆರ್‌ಪಿ ತುಕಡಿಗಳನ್ನು ಪೊಲೀಸರು ನಿಯೋಜನೆ ಮಾಡಿದ್ದಾರೆ.
Sign in to your account
Username or Email Address


Password

 Remember Me


