ಧಾರವಾಡ: ಜನವರಿ 12 ರಿಂದ 16 ರವರೆಗೆ ಹುಬ್ಬಳ್ಳಿ, ಧಾರವಾಡದಲ್ಲಿ (Hubballi-Dharwada) ರಾಷ್ಟ್ರೀಯ ಯುವ ಸಪ್ತಾಹದ ಅಂಗವಾಗಿ ಯುವ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 12 ರಂದು ಮಧ್ಯಾಹ್ನ 1:30ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟರಿಗೂ ಆಹ್ವಾನ ನೀಡಲಾಗುತ್ತಿದೆ ಎಂದ ಜೋಶಿ, ಸ್ಥಳದಲ್ಲೇ ನಟ ಅಕ್ಷಯ್ ಕುಮಾರ್ ಅವರಿಗೆ ಕರೆ ಮಾಡಿ ಯುವ ಜನೋತ್ಸವಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಪ್ರಧಾನಮಂತ್ರಿಗಳು ಆಗಮಿಸುತ್ತಿರುವುದರಿಂದ ನೀವೂ ಕಾರ್ಯಕ್ರಮಕ್ಕೆ ಬರಬೇಕು ಎಂದು ಜೋಶಿ ಮನವಿ ಮಾಡಿದರು. ಇದನ್ನೂ ಓದಿ: ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯಅಕ್ಷಯ್ ಕುಮಾರ್ ಲಂಡನ್‍ಗೆ ಹೊರಟಿರುವುದಾಗಿ ಹೇಳಿದರು. ಹಾಗಾಗಿ ಕಾರ್ಯಕ್ರಮಕ್ಕೆ ಬರುವುದು ಅನುಮಾನವಾಗಿದೆ. ಕೋವಿಡ್ (Covid-19) ನಂತರ ಮೊದಲ ಬಾರಿಗೆ ಮೋದಿ ಅವರು ಧಾರವಾಡಕ್ಕೆ ಆಗಮಿಸಲಿದ್ದಾರೆ. ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗಿದೆ. ಕವಿವಿಯಲ್ಲಿ ಇವೆಂಟ್ ನಡೆಯುತ್ತದೆ. ಉದ್ಘಾಟನೆ ಕಾರ್ಯಕ್ರಮದ ಸ್ಥಳ ಇನ್ನೂ ಅಂತಿಮಗೊಂಡಿಲ್ಲ. ಅವಳಿನಗರದ ಎಲ್ಲ ಕಡೆ ವೇದಿಕೆ ಮಾಡಲಿದ್ದೇವೆ. ಇದಲ್ಲದೇ ಐಐಟಿ ಉದ್ಘಾಟನೆ, ಹುಬ್ಬಳ್ಳಿ ರೈಲ್ವೇ ಪ್ಲಾಟ್‍ಫಾರ್ಮ್ ಸೇರಿ ಹಲವು ಉದ್ಘಾಟನಾ ಕಾರ್ಯಕ್ರಮಗಳು ಅಂದು ಮೋದಿ ಅವರಿಂದ ನಡೆಯಲಿವೆ ಎಂದು ಜೋಶಿ ಮಾಹಿತಿ ನೀಡಿದರು. ಇದನ್ನೂ ಓದಿ: ನಮಗೆ ಜೀವ ನೀಡುವುದೂ ಗೊತ್ತು.. ಜೀವ ತೆಗೆಯುವುದೂ ಗೊತ್ತು – ಪ್ರಜ್ಞಾ ಸಿಂಗ್‌ ಪ್ರಚೋದನಕಾರಿ ಭಾಷಣ
Sign in to your account
Username or Email Address


Password

 Remember Me


