ಬೆಂಗಳೂರು: ನಗರದ ಪೂರ್ವ ಹೈಲ್ಯಾಂಡ್ ಅಪಾರ್ಟ್‍ಮೆಂಟ್‍ನ (Apartment) 19ನೇ ಮಹಡಿಯಿಂದ ಮಹಿಳೆಯೊಬ್ಬರು (Woman) ಬಿದ್ದು ಸಾವನ್ನಪ್ಪಿರುವ ಘಟನೆ ತಲಘಟ್ಟಪುರದಲ್ಲಿ ನಡೆದಿದೆ.ಚರಿಷ್ಮಾ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಚರಿಷ್ಮಾ ಚಿಕಿತ್ಸೆಗೆಂದು ಕೆನಡಾದಿಂದ (Canada) ಕೆಲದಿನಗಳ ಹಿಂದೆ ಬೆಂಗಳೂರಿಗೆ (Bengaluru) ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಚರಿಷ್ಮಾ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಾನಸಿಕ, ದೈಹಿಕ ಕಿರುಕುಳಕ್ಕೆ ಬೇಸತ್ತು ವಿವಾಹಿತೆ ಆತ್ಮಹತ್ಯೆಮೃತ ಚರಿಷ್ಮಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಹಾಗಾಗಿ ಚಿಕಿತ್ಸೆಗೆಂದು ಕೆನಡಾದಿಂದ ಬೆಂಗಳೂರಿಗೆ ಆಗಮಿಸಿ ತಲಘಟ್ಟಪುರದ ಸಂಬಂಧಿಕರ ಮನೆಯ ಫ್ಲ್ಯಾಟ್‌ನಲ್ಲಿ ವಾಸವಾಗಿದ್ರು. ಕೆಲ ದಿನಗಳಿಂದ ಚರಿಷ್ಮಾ ಡಿಪ್ರೆಶನ್‍ಗೆ ಒಳಗಾಗಿದ್ದರಂತೆ. ಈ ಹಿಂದೆ ಕೂಡ ಒಂದು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆ ಬಳಿಕ ಇಂದು ಎರಡನೇ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿ ಅಪಾರ್ಟ್‍ಮೆಂಟ್‍ನ 19ನೇ ಮಹಡಿ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿ : ಸಹೋದರ ಮಹಮ್ಮದ್
Sign in to your account
Username or Email Address


Password

 Remember Me


