ಹಾಸನ : ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು (Snake) ಕಚ್ಚಿ ಬಾಲಕನೊಬ್ಬ (Boy) ಸಾವನ್ನಪ್ಪಿದ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ರೋಷನ್ (4) ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ. ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್‍ಗೆ ಹಾವು ಕಚ್ಚಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ರೋಷನ್‍ನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್‍ನಲ್ಲಿ ಕರೆ ತಂದಿದ್ದಾರೆ. ಆದರೆ ಅಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರ ಪಟ್ಟಣ್ಣದ ಆಸ್ಪತ್ರೆಗೆ ತೆರಳುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.ಆದರೆ ಹೆತ್ತೂರಿನಿಂದ ಸಕಲೇಶಪುರ ಪಟ್ಟಣದ ಆಸ್ಪತ್ರೆಗೆ ಕರೆದೊಯ್ಯಲು ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಬಂದಿರಲಿಲ್ಲ. ಇದರಿಂದಾಗಿ ರೋಷನ್‌ನ್ನು ಸಕಲೇಶಪುರಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅರ್ಧಕ್ಕೆ ಅಂಬುಲೆನ್ಸ್ ಬಂದಿದೆ. ಆದರೆ ಅಷ್ಟರಾಗಲೇ ಬಾಲಕ ಸಾವನ್ನಪ್ಪಿದ್ದ. ಇದನ್ನೂ ಓದಿ: ಚೀನಾದಲ್ಲಿ ಒಂದೇ ದಿನ 3.7 ಕೋಟಿ ಮಂದಿಗೆ ಸೋಂಕುಸಕಲೇಶಪುರ ತಾಲೂಕು ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಏಕೈಕ ಅಂಬುಲೆನ್ಸ್ ಆಗಿದೆ. ಆದರೂ ಆ ಅಂಬುಲೆನ್ಸ್ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬಾರದ ಕಾರಣ ಬಾಲಕ ಸಾವನ್ನಪ್ಪಿದ್ದಾನೆಂದು ಪೋಷಕರು ಆರೋಪಿಸಿದ್ದಾರೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿಗೆ ಕೆಲಸ ಅರಸಿ ಬಂದಿದ್ದವನಿಂದ ಮಗುವಿನ ಮೇಲೆ ಅತ್ಯಾಚಾರ – ಆರೋಪಿ ಬಂಧನ
Sign in to your account
Username or Email Address


Password

 Remember Me


