ಬೆಂಗಳೂರು: ಬಿಜೆಪಿ (BJP) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ (40 Percent Commission) ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (ಕೆಂಪೇಗೌಡ) (Kempanna) ಅವರನ್ನು ಬೆಂಗಳೂರಿನ (Bengaluru) ವೈಯಾಲಿಕಾವಲ್ ಪೊಲೀಸರು (Police) ಬಂಧಿಸಿದ್ದಾರೆ.ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ ಇತರ 18 ಮಂದಿ ಗುತ್ತಿಗೆದಾರರ ವಿರುದ್ಧ ಸಚಿವ ಮುನಿರತ್ನ (Munirathna) 50 ಕೋಟಿ ಮಾನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ ಎಫ್‌ಐಆರ್ (FIR) ದಾಖಲಾಗಿತ್ತು. ಡಿಸೆಂಬರ್ 23 ರಂದು ಕೆಂಪಣ್ಣನಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಈ ಸಂಬಂಧ ಯಾವುದೇ ಉತ್ತರ ನೀಡದೇ ಇರುವುದರಿಂದ ಇಂದು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರರ ಸಂಘ, ಕೆಂಪಣ್ಣ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ: ಮುನಿರತ್ನಸಚಿವ ಮುನಿರತ್ನ ಈ ಹಿಂದೆಯೇ ನನ್ನ ವಿರುದ್ಧ ಮಾಡಿದ ಆರೋಪವು ಸೇರಿದಂತೆ 40 ಪರ್ಸೆಂಟ್‌ ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎಂದು ದಾವೆ ಹೂಡಿದ್ದೇನೆ. 50 ಕೋಟಿ ಮಾನನಷ್ಟ ಪ್ರಕರಣವನ್ನು 4 ತಿಂಗಳ ಒಳಗಡೆ ಇತ್ಯರ್ಥ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದನ್ನೂ ಓದಿ; ಕ್ಷಮೆ ಕೇಳದ ಕೆಂಪಣ್ಣ ಸೇರಿ 18 ಮಂದಿ ಮೇಲೆ 50 ಕೋಟಿ ಮಾನನಷ್ಟ ಕೇಸ್‌, ಶೀಘ್ರವೇ ಎಫ್‌ಐಆರ್‌: ಮುನಿರತ್ನ
ಕೆಂಪಣ್ಣ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. ಆಧಾರ ರಹಿತ ಆರೋಪ ಮಾಡಿದ್ದಕ್ಕೆ ನಾನು 7 ದಿನಗಳ ಒಳಗಡೆ ಕ್ಷಮೆ ಕೇಳುವಂತೆ ಸೂಚಿಸಿದ್ದೆ. ಆದರೆ ಅವರು ಕ್ಷಮೆ ಕೇಳದ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ. ಚುನಾವಣೆ ನಡೆಯುವ ಮುನ್ನ ಇತ್ಯರ್ಥ ಆಗಬೇಕಾಗಿರುವುದರಿಂದ 4 ತಿಂಗಳ ಒಳಗಡೆ ಪ್ರಕರಣವನ್ನು ಮುಗಿಸುವಂತೆ ಸೆಕ್ಷನ್ 227 ಅನ್ವಯ ರಿಟ್ ಅರ್ಜಿ ಹಾಕುತ್ತಿದ್ದೇವೆ. ಪ್ರಕರಣದ ಆರೋಪಿಗಳು ಯಾವುದೇ ಆಸ್ತಿ ಪರಭಾರೆ ಮಾಡುವಂತಿಲ್ಲ. ಯಾವುದೇ ಇಲಾಖೆಯಲ್ಲಿ ಯಾವುದೇ ಕಾಮಗಾರಿ ಮಾಡಿದ್ದರೆ ಅದರ ಬಿಲ್ ಬಿಡುಗಡೆ ಆಗಬಾರದು. ಅವರ ಕುಟುಂಬದಲ್ಲಿ ಯಾವುದೇ ವಿಲ್ ಮಾಡುವಂತಿಲ್ಲ. ಎಲ್ಲದಕ್ಕೂ ತಡೆಯಾಜ್ಞೆ ತರಲಾಗಿದ್ದು, ಎಲ್ಲಾ 18 ಮಂದಿಗೂ ಇದು ಅನ್ವಯವಾಗಲಿದೆ ಎಂದು ಹೇಳಿದ್ದರು.
Sign in to your account
Username or Email Address


Password

 Remember Me


