ಬೆಳಗಾವಿ: ಸುವರ್ಣಸೌಧ (Suvarna Soudha) ಖಾಲಿ ಇರುವ ಸಮಯದಲ್ಲಿ ನನ್ನ 5 ವರ್ಷದ ಮಗಳ (Daughter) ಹುಟ್ಟುಹಬ್ಬ (Birth Day) ಆಚರಿಸಲು ಅದನ್ನು ಬಾಡಿಗೆ ಕೊಡಿ ಎಂದು ವಕೀಲರೊಬ್ಬರು ಸಭಾಪತಿಗಳಿಗೆ ಮತ್ತು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್​ ತಾಲೂಕಿನ ಘಟಪ್ರಭಾ ನಿವಾಸಿ ಹಾಗೂ ವಕೀಲ ಮಲ್ಲಿಕಾರ್ಜುನ ಚೌಕಾಶಿ ಎಂಬುವರೇ ಪತ್ರ ಬರೆದವರಾಗಿದ್ದಾರೆ. ಸುವರ್ಣಸೌಧ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಖಾಲಿ ಇರುತ್ತದೆ. ಇದರಿಂದ ಶುಭ ಕಾರ್ಯಗಳಿಗೆ ಬಾಡಿಗೆ ಕೊಟ್ಟರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮದುವೆಯಾಗಲು ವಧು ಹುಡುಕಿಕೊಡಿ- ಮರೆವಣಿಗೆಯಲ್ಲಿ ವರರಂತೆ ಬಂದು ಸರ್ಕಾರಕ್ಕೆ ಮನವಿ ಮಾಡಿದ ಯುವಕರುಪತ್ರದಲ್ಲೇನಿದೆ?: ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸಲು ಅನುಮತಿ ನೀಡಿ. ಜೊತೆಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ಹುಟ್ಟದಟ್ಟಿ ಮಾಡುವ ಪದ್ಧತಿಯಿದ್ದು, ಇದು ಕೂಡ ಜೀವನದಲ್ಲಿ ಒಮ್ಮೆ ಬರುವಂತಹದ್ದು. ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕು ಎಂದು ವಿನಂತಿಸಿದ್ದಾರೆ. ಇದನ್ನೂ ಓದಿ:  ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಫಾರ್ಮ್ ಹೌಸ್ ಮೇಲೆ ದಾಳಿ – ವನ್ಯಜೀವಿಗಳು ಪತ್ತೆ
Sign in to your account
Username or Email Address


Password

 Remember Me


