ದಾವಣಗೆರೆ: ಕಾಂಗ್ರೆಸ್‍ನ (Congress) ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ (S.S Mallikarjun) ಅವರ ದಾವಣಗೆರೆಯ ಕಲ್ಲೇಶ್ವರ ಮಿಲ್ ಹಿಂಭಾಗದ ಫಾರ್ಮ್‍ಹೌಸ್ (Farmhouse) ಮೇಲೆ ಸಿಸಿಬಿ (CCB) ಪೊಲೀಸರು ಹಾಗೂ ಅರಣ್ಯ ಇಲಾಖೆ (Forest Department) ಸಿಬ್ಬಂದಿ ದಾಳಿ ನಡೆಸಿದ್ದಾರೆ.ದಾಳಿ ವೇಳೆ ಫಾರ್ಮ್‍ಹೌಸ್‍ನಲ್ಲಿ ಸಾಕುತ್ತಿದ್ದ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರಿನ ಹೆಬ್ಬಾಳದಲ್ಲಿ ಕಳೆದ ಡಿ.18 ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡಲು ಬಂದಿದ್ದ ಸೆಂಥಿಲ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಜೀವಂತ ವನ್ಯಪ್ರಾಣಿಗಳು ಸಿಕ್ಕಿವೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ನಿಷೇಧಿತ ಕೋಳಿ ಜೂಜಾಟ – ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್‌ಫಾರ್ಮ್ ಹೌಸ್‍ನಲ್ಲಿ ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಮಲ್ಲಿಕಾರ್ಜುನ್ ಫಾರ್ಮ್ ಹೌಸ್‍ನಲ್ಲಿ ಜಿಂಕೆ ಸಾಕಲಾಗಿತ್ತು. ಆದರೆ ಇವುಗಳನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕಾನೂನು ಬಾಹಿರವಾಗಿ ಪ್ರಾಣಿಗಳ ಚರ್ಮ, ಕೊಂಬು ಮಾರಾಟ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಾಕು ತಂದೆಯ ವಚನ ಪಾಲಿಸಲು ಮುಂದಾಗಿ ಸಿಎಂ ಗೊಂದಲದಲ್ಲಿದ್ದಾರೆ – ಬಿಎಸ್‍ವೈ ವಿರುದ್ಧ ಯತ್ನಾಳ್ ಪರೋಕ್ಷ ವಾಗ್ದಾಳಿದಾಳಿ ವೇಳೆ ಬಳಿಕ ಪರವಾನಗಿ ಪಡೆದು ಸಾಕುತ್ತಿದ್ದ ನಾಲ್ಕೈದು ಜಿಂಕೆಗಳು ಮರಿ ಹಾಕಿದ್ದರಿಂದ ಇವುಗಳ ಸಂಖ್ಯೆ ಈಗ ಹೆಚ್ಚಾಗಿದೆ. ಕಾನೂನು ಪ್ರಕಾರವೇ ನಾವು ಸಾಕಲಾಗಿದೆ ಎಂದು ಎಸ್.ಎಸ್ ಮಲ್ಲಿಕಾರ್ಜುನ್‌ ಆಪ್ತರು ಮಾಹಿತಿ ನೀಡಿದ್ದಾರೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದು, ಶೀಘ್ರವೇ ವಿಶೇಷ ತನಿಖಾಧಿಕಾರಿ ನೇಮಿಸಿ ಪ್ರಕರಣದ ತನಿಖೆ ಆರಂಭಿಸುವುದಾಗಿ ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.Live Tv
[brid partner=56869869 player=32851 video=960834 autoplay=true]
Sign in to your account
Username or Email Address


Password

 Remember Me


