ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸಾಮಾನ್ಯ ಜನರಂತೆ ಸ್ವೀಟ್ ಮಾರ್ಟ್ ಅಂಗಡಿಗೆ ಹೋಗಿ ಬೆಳಗಾವಿಯ ಕುಂದಾ (Belagavi Kunda), ಗೋಕಾಕ್ ಕರದಂಟು (Gokak Karadant) ಖರೀದಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ನಗರದ ಖಾನಾಪುರ ರಸ್ತೆಯ ಸ್ವೀಟ್ ಮಾರ್ಟ್‌ನಲ್ಲಿ ಕಾಮನ್ ಮ್ಯಾನ್ ಸಿಎಂ ಅಂತಲೇ ಗುರುತಿಸಿಕೊಳ್ಳುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಸಂಜೆ ಕುಂದಾ ಮತ್ತು ಕರದಂಟು ಖರೀದಿಸಿದ್ದರು. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬೊಮ್ಮಾಯಿಗೆ ಅವರ ಭಾಷೆಯಲ್ಲೇ ಉತ್ತರಿಸಿ: NCP ನಾಯಕಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿಗೆ ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ. ಇತ್ತ ಸಿಎಂ ಬೊಮ್ಮಾಯಿ ಯಾರಿಗೆ ಸಿಹಿ ಸುದ್ದಿ ನೀಡ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತರಹೇವಾರು ಚರ್ಚೆಗಳು ನಡೆಯುತ್ತಿವೆ. ಇದನ್ನೂ ಓದಿ: ಇಟಲಿ ಕಾಂಗ್ರೆಸ್‍ನ ಒಂದು ನಾಯಿಯೂ ಭಾರತದ ಪರವಾಗಿ ಬೊಗಳಿಲ್ಲ: ಸಿ.ಟಿ. ರವಿ
Sign in to your account
Username or Email Address


Password

 Remember Me


