ಬೆಳಗಾವಿ: ಇಟಲಿ ಕಾಂಗ್ರೆಸ್‍ನ (Congress) ಒಂದು ನಾಯಿಯೂ ಭಾರತದ ಪರವಾಗಿ ಬೊಗಳಿಲ್ಲ, ಬದಲಿಗೆ ಚೀನಾ (China), ಪಾಕಿಸ್ತಾನದ (Pakistan) ಪರ ಬೊಗಳುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (CT Ravi) ವಿವಾದಾತ್ಮಕ ಹೇಳಿಕೆ ನೀಡಿದರು.ಸುದ್ದಿಗರಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಒಂದು ನಾಯಿಯೂ ಭಾಗವಹಿಸಿಲ್ಲ ಎಂದು ಮಲ್ಲಿಕಾರ್ಜುನ್ ಖರ್ಗೆಯವರು (Mallikarjun Kharge) ಹೇಳಿದ್ದಾರೆ. ಆದರೆ ಭಾರತೀಯ ಜನಸಂಘ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದೆ. ಸರ್ವಾಧಿಕಾರಿ ಇಂದಿರಾ ಗಾಂಧಿಯನ್ನು ಕೆಳಗೆ ಇಳಿಸಿದರು. ಖರ್ಗೆಯವರು ಅಂದಿನ ದಿನಮಾನ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.ಖರ್ಗೆಯವರೇ ಸ್ವಾತಂತ್ರ್ಯ ಸಿಕ್ಕಿರುವುದು ದೇಶ ಲೂಟಿ ಹೊಡೆಯಲಿಕ್ಕಾ? ಕಾಂಗ್ರೆಸ್ ನಾಯಿಗಳಿಗೂ ಫೈವ್ ಸ್ಟಾರ್ ಟ್ರೀಟ್ಮೆಂಟ್ ಸಿಗಬೇಕೆಂದು ಲೂಟಿ ಮಾಡಿದ್ದೀರಾ? ಸ್ವಾತಂತ್ರ್ಯ ಹೋರಾಟದ ಕಾಂಗ್ರೆಸ್ ಬೇರೆ, ಈಗಿನ ಕಾಂಗ್ರೆಸ್ ಬೇರೆ, ಈಗಿರುವುದು ಇಟಲಿ ಕಾಂಗ್ರೆಸ್ ಎಂದು ಕಿಡಿಕಾರಿದರು. ಇದನ್ನೂ ಓದಿ: 5 ಲಕ್ಷದ ವಾಚ್‌ ವಿವಾದ: ದೇಶಭಕ್ತಿಯ ಟ್ವಿಸ್ಟ್‌ ನೀಡಿ ಸವಾಲೆಸೆದ ಅಣ್ಣಾಮಲೈಇಟಲಿ ನಾಯಿ ನಮ್ಮ ಸೈನಿಕರ ವಿರುದ್ಧ ಬೊಗಳುತ್ತದೆ. ದೇಶ ವಿರೋಧಿ ಇಟಲಿ ನಾಯಿಯನ್ನು ಈಗಿನ ಕಾಂಗ್ರೆಸ್ ಸಾಕುತ್ತಿದೆ ಎಂದು ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರನ್ನು ಪರೋಕ್ಷವಾಗಿ ನಾಯಿಗೆ ಹೋಲಿಸಿದರು. ಇದನ್ನೂ ಓದಿ: ಬೆಂಗಳೂರಿನ ರಸ್ತೆಗಳು ಗುಂಡಿ ಮುಕ್ತ ಆಗದಿದ್ರೆ ಇಂಜಿನಿಯರ್‌ಗಳ ಸಂಬಳ ಕಟ್: BBMP ಕಮಿಷನರ್ ವಾರ್ನಿಂಗ್
Sign in to your account
Username or Email Address


Password

 Remember Me


