ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಕೆ.ಎಸ್.ಈಶ್ವರಪ್ಪ (KS Eshwarappa) ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.ನಗರದ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರು ಕೂಡ ಸಕರಾತ್ಮಕ ಸ್ಪಂದಿಸಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸಾಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಸಿಬಿಐ ಆಗಿದೆ. ಅವರು ಪ್ರಕರಣಕ್ಕನುಗುಣವಾಗಿ ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದು ಹೇಳಿದರು. ಇದನ್ನೂ ಓದಿ: ಈ ದೇಶಕ್ಕಾಗಿ BJP ನಾಯಕನ ಮನೆ ನಾಯಿಯೂ ಸತ್ತಿಲ್ಲ – ಕೋಲಾಹಲ ಎಬ್ಬಿಸಿದ ಖರ್ಗೆ ಹೇಳಿಕೆಇದೇ ವೇಳೆ ಹಲಾಲ್ ಕಟ್ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಹಲಾಲ್ ಕಟ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನನ್ನನ್ನು ಆದಷ್ಟು ಬೇಗ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಿ: ಈಶ್ವರಪ್ಪ ಭಾವುಕ ಮಾತು
Sign in to your account
Username or Email Address


Password

 Remember Me


