– ವಿಪಕ್ಷವಾಗಲು ಕಾಂಗ್ರೆಸ್‌ನಿಂದ ತಯಾರಿ
– ನಮ್ಮದು ಹೋರಾಟ, ಕಾಂಗ್ರೆಸ್‌ನದ್ದು ಹಾರಾಟಮಂಡ್ಯ: ಕಾಂಗ್ರೆಸ್ (Congress) ವಿಪಕ್ಷವಾಗಿ ಬೀದಿಗಿಳಿದು ‘ನಾನು ಕಳ್ಳ ಅಲ್ಲ, ನಾನು ಕಳ್ಳ ಅಲ್ಲ, ನನ್ನ ನಂಬಿ’ ಎಂದು ಹೇಳುವುದನ್ನು ಗಮನಿಸಿದರೆ, ಕಾಂಗ್ರೆಸ್ ಪಕ್ಷ ವಿಪಕ್ಷವಾಗಲು ತಯಾರಿ ಮಾಡುತ್ತಿರುವಂತೆ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R.Ashok) ವ್ಯಂಗ್ಯವಾಡಿದ್ದಾರೆ.ಮಂಡ್ಯದ (Mandya) ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತು ಪುಸ್ತಕ ಬಿಡುಗಡೆ ಮಾಡಿ, ಅವರು ಮಾತನಾಡಿದರು. ಈ ವೇಳೆ ಆಡಳಿತ ಪಕ್ಷವಾದ ಕಾಂಗ್ರೆಸ್ ಪಕ್ಷವು ದಾಖಲೆಗಳನ್ನು ಕೊಟ್ಟು ಸರ್ಕಾರ ಸ್ವಚ್ಛ, ಪಾರದರ್ಶಕ ಎಂದು ವಿಧಾನಸಭೆ ಒಳಗೆ ಹೇಳಬೇಕಿತ್ತು. ಆದರೆ ಕಾಂಗ್ರೆಸ್ ವಿಪಕ್ಷವಾಗಿ ಕೆಲಸ ಮಾಡಲು ಪೀಠಿಕೆ ಹಾಕಲು ಹೊರಡುತ್ತಿದೆ ಎಂದು ಕುಟುಕಿದ್ದಾರೆ.ವಿಪಕ್ಷವಾಗಿ ನಾವು ಹೋರಾಟ ಮಾಡುತ್ತಿದ್ದೇವೆ, ಕಾಂಗ್ರೆಸ್ ಪಕ್ಷ ಆಡಳಿತ ಪಕ್ಷವಾಗಿ ಹಾರಾಟ ಮಾಡುತ್ತಿದೆ. ಮಂತ್ರಿಗಳಿಗೆವಹಿಸಿದ ಸಭೆಗಳನ್ನು ಮಾಡಿ, ನಾವು ಬಿಜೆಪಿ ಭ್ರಷ್ಟಾಚಾರಗಳನ್ನು ಬಯಲಿಗೆ ತರುತ್ತೇವೆ. ಕೇಂದ್ರ ನೀಡುವ ಅನುದಾನದಲ್ಲಿ ತಾರತಮ್ಯವಾಗಿದೆ ಎಂದು, ಆ ಬಗ್ಗೆ ಸಮಾವೇಶ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ಸಿನವರು ನಾಟಕ ಆಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ಕೇಂದ್ರದ ಅನುದಾನ ಬಾರದಿದ್ದರೆ ಪ್ರಜಾಪ್ರಭುತ್ವದ ರೀತಿಯಲ್ಲಿ ಮಾತನಾಡಬೇಕಿತ್ತು. ನಮ್ಮ ರಾಜ್ಯದ ಸಂಸದರಾದ ಮಲ್ಲಿಕಾರ್ಜುನ ಖರ್ಗೆ ಜೀಯವರು ವಿಪಕ್ಷ ನಾಯಕರು, ಅವರು ತಾರತಮ್ಯ ಆಗಿದೆ ಎಂದು ಸಂಸತ್ತಿನಲ್ಲಿ ಒಂದು ದಿನವೂ ಮಾತನಾಡಿಲ್ಲ. ಇಲ್ಲಿ ರಾಜಕೀಯದ ಬೇಳೆ ಬೇಯಿಸಲು ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ನಡೆಸುತ್ತಿದ್ದಾರೆ. ಈ ಬಗ್ಗೆ ಸ್ವತಃ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿಗೆ ಬಂದು ಕಾಂಗ್ರೆಸ್ಸಿನವರ ಮುಖಕ್ಕೆ ಮಂಗಳಾರತಿ ಎತ್ತಿ ಹೋಗಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ಸರ್ಕಾರ 10 ವರ್ಷ ಇತ್ತು. ಅದೇ ರೀತಿ ನರೇಂದ್ರ ಮೋದಿಯವರ ಸರಕಾರ 10 ವರ್ಷ ಇತ್ತು. ಅಂಕಿ ಅಂಶಗಳೊಂದಿಗೆ ಹೋಲಿಸಿ ಅನುದಾನ, ಸಹಾಯದ ವಿವರ ನೀಡಿದ್ದಾರೆ. ಯಾವುದರಲ್ಲೂ ಕಡಿಮೆ ಮಾಡಿಲ್ಲ. ನಾನೇ ಹಿಂದೆ ಕಂದಾಯ ಸಚಿವನಾಗಿದ್ದೆ. ಡಾ.ಮನಮೋಹನ್ ಸಿಂಗ್ ಅವರ ಸರ್ಕಾರ ಕೊಟ್ಟ ಮೊತ್ತದಿಂದ 5 ಪಟ್ಟು ಜಾಸ್ತಿ ಮೋದಿಯವರ ಸರ್ಕಾರ ಕೊಟ್ಟಿದೆ ಎಂದು ಅವರು ಹೇಳಿದ್ದಾರೆ.ಪಾದಯಾತ್ರೆ ಅಂತಿಮ ಘಟ್ಟ
ಪಾದಯಾತ್ರೆಯ ಅಂತಿಮ ಘಟ್ಟಕ್ಕೆ ತಲುಪಿದ್ದೇವೆ. ಇಂದು ಸಂಜೆ ಮೈಸೂರು ಗಡಿಭಾಗ ತಲುಪಿ ಶನಿವಾರ ಬೆಳಿಗ್ಗೆ ಆರೇಳು ಕಿಮೀ ಪಾದಯಾತ್ರೆಯ ಬಳಿಕ ಮೈಸೂರಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಜನರು ನಮ್ಮನ್ನು ವಿಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಸರ್ಕಾರ ಮಾಡುವ ತಪ್ಪುಗಳನ್ನು ಜನರ ಮುಂದಿಡುವುದು, ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ. ಅವರ ಭ್ರಷ್ಟಾಚಾರ, ಅವ್ಯವಹಾರ, ಸ್ವಜನ ಪಕ್ಷಪಾತ- ಇವೆಲ್ಲವನ್ನೂ ತಿಳಿಸುವುದು, ಹೋರಾಟ ಮಾಡುವುದು ನಮ್ಮ ಹಕ್ಕು ಎಂದು ಅವರು ಪ್ರತಿಪಾದಿಸಿದರು.ಕಾನೂನು ಪ್ರಕಾರ, ನಿಯಮ ಪ್ರಕಾರ ಸಿದ್ದರಾಮಯ್ಯನವರು ನಿವೇಶನ ಪಡೆದಿದ್ದರೆ 2014ರಲ್ಲಿ ಕಡತ ಬಂದಾಗ ಯಾಕೆ ತಿರಸ್ಕರಿಸಿದ್ದರು? ಇದು ಬಿಜೆಪಿಯ ಪ್ರಶ್ನೆ. 10 ವರ್ಷ ಅದಕ್ಕಾಗಿ ಕಾಯಬೇಕಿತ್ತೇ? ಅನ್ಯಾಯ ಇದ್ದ ಕಾರಣ ನೀವು ಆಗ ಸಹಿ ಹಾಕಿಲ್ಲ ಅಲ್ಲವೇ? ಈ ಆಪಾದನೆಗೆ ಅವರಲ್ಲಿ ಉತ್ತರ ಇಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.ಅಣ್ಣ ಡಿ.ಕೆ.ಶಿವಕುಮಾರಣ್ಣ, ಸಿದ್ರಾಮಣ್ಣ, ನೀವು ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಮಾಡಿದ್ದೀರಿ. 25 ಸಾವಿರ ಕೋಟಿ ರೂ. ಟಿಎಸ್‌ಪಿ ದಲಿತರ ಉದ್ಧಾರಕ್ಕೆ ಸೇರಬೇಕಾದ ಹಣವನ್ನು ಗ್ಯಾರಂಟಿ ಕೊಡಲು ಬಳಸಿದ್ದೀರಿ. ಇದಕ್ಕೆ ದಲಿತರ ಹಣವೇ ಬೇಕಾಗಿತ್ತು. ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.ಯಾರು ನಿಮ್ಮ ಕೈ ಕಟ್ಟಿ ಹಾಕಿದ್ದರು?
ಬೇರೆ ಜಾತಿಗಳವರ ಹಣವನ್ನು ಇವರು ಮುಟ್ಟಿಲ್ಲ. ಯಾರೂ ಕೇಳೋರಿಲ್ಲ; ಹೇಳೋರಿಲ್ಲವೆಂದು ದಲಿತರದೇ ಹಣ ವರ್ಗಾವಣೆ ಮಾಡಿದ್ದಾರೆ. ಇದೆಲ್ಲ ವಿವರವನ್ನೂ ನಾವು ಬಿಡುಗಡೆ ಮಾಡಿದ್ದೇವೆ. ಬೊಮ್ಮಾಯಿ, ನಮ್ಮ ಮೇಲೆ ಇದ್ದ ಆರೋಪಗಳ ದಾಖಲೆಗಳನ್ನು ಆಗ ಬಿಡುಗಡೆ ಮಾಡಬೇಕಿತ್ತು. ಯಾರು ನಿಮ್ಮ ಕೈ ಕಟ್ಟಿ ಹಾಕಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ.






 Advertisement 




Sign in to your account
Username or Email Address


Password

 Remember Me


