ಬೆಳಗಾವಿ: ಸುವರ್ಣಸೌಧದಲ್ಲಿ (Suvarna Soudha) ಸಾವರ್ಕರ್ (Savarkar) ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ. ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ ಎಂದು ಡಿ.ಕೆ ಶಿವಕುಮಾರ್ (DK Shivakumar)  ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಾವು ಉತ್ತರ ಕರ್ನಾಟಕದಲ್ಲಿ ಅಧಿವೇಶನ ಮಾಡಲೇಬೇಕೆಂಬ ಒತ್ತಾಯದಿಂದಾಗಿ ಅಧಿವೇಶನ ನಡೆಯುತ್ತಿದೆ. ಬಿಜೆಪಿ ಸರ್ಕಾರ ಬಂದ ನಂತರ ಉತ್ತರ ಕರ್ನಾಟಕವನ್ನು ಸಂಪೂರ್ಣ ಮರೆತಿದ್ದಾರೆ. ಉತ್ತರ ಕರ್ನಾಟಕವನ್ನು ಸರ್ಕಾರ ಮರೆತಿದ್ದು, ಇಲ್ಲಿನ ಪರಿಸ್ಥಿತಿಯನ್ನು ಸಮಸ್ಯೆಗಳನ್ನು ಆಲಿಸಲು ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಏಯ್‌ ಯತ್ನಾಳ್‌ – ಕಾರಿಡಾರ್‌ನಲ್ಲಿ ಸಿದ್ದು ಇತಿಹಾಸ ಪಾಠಸರ್ಕಾರ ಇಲ್ಲಿನ ಪರಿಸ್ಥಿಯನ್ನು ಮರೆತು ಅಧಿವೇಶನದ ದಾರಿ ತಪ್ಪಿಸಲು ಹೊರಟಿದೆ. ಸ್ವಾತಂತ್ರಕ್ಕೆ ಸಾವರ್ಕರ್ ಕೊಡುಗೆ ಇಲ್ಲ. ಅವರು ತಪ್ಪು ಒಪ್ಪಿಕೊಂಡು ಪತ್ರ ಬರೆದು ಕೊಟ್ಟಿದ್ದರು. ಅವರು ಬ್ರಿಟಿಷರ ಜೊತೆ ಕೈ ಜೋಡಿಸಿದ್ದರು. ಕಮೀಷನ್, ಮತದಾರರ ಪಟ್ಟಿ ಹಗರಣ ಯಾವುದೂ ಚರ್ಚೆ ಆಗಬಾರದು ಅಂತ ಬಿಜೆಪಿಯವರು ಇದೀಗ ಸವರ್ಕರ್ ಫೋಟೋ ಹಾಕಿ ವಿವಾದ ಸೃಷ್ಟಿಸುತ್ತಿದ್ದಾರೆ. ಸ್ಪೀಕರ್ ಗಾಂಧಿ ಹಾಗೂ ಅಂಬೇಡ್ಕರ್ ಸೇರಿದಂತೆ ಮಹನಿಯರ ಫೋಟೋ ಹಾಕ್ತೀವಿ ಅಂತ ಹೇಳಿದ್ದರು. ಆದರೆ ಇಲ್ಲಿಗೆ ಬಂದ ಮೇಲೆ ಮಾಧ್ಯಮ ಮೂಲಕ ಸಾವರ್ಕರ್ ಫೋಟೋ ಹಾಕೋದು ಗೊತ್ತಾಯಿತು. ಸಾವರ್ಕರ್‌ಗೂ ನಮ್ಮ ರಾಜ್ಯಕ್ಕೂ ಏನು ಸಂಬಂಧ? ಸಾವರ್ಕರ್ ವಿವಾದಾತ್ಮಕ ವ್ಯಕ್ತಿ ಅಂತ ಎಲ್ಲರಿಗೂ ಗೊತ್ತು. ಇದೀಗ ಬಿಜೆಪಿ ಅಧಿವೇಶನಕ್ಕೆ ಅಡ್ಡಿ ತರಲು ಹೊರಟಿದೆ ಎಂದು ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ನಾವು ಹಿಂದೂಗಳೇ – ಹುಟ್ಟಿದ್ದು ಹಿಂದೂವಾಗಿ ಸಾಯುವುದು ಹಿಂದೂವಾಗಿಯೇ: ಡಿಕೆಶಿLive Tv
[brid partner=56869869 player=32851 video=960834 autoplay=true]
Sign in to your account
Username or Email Address


Password

 Remember Me


