ಹುಬ್ಬಳ್ಳಿ: ಸಚಿವ ಆರ್. ಅಶೋಕ್ (R.Ashok) ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ. ಅಮಾಯಕ ಅವಾರ್ಡ್ ತೆಗೆದುಕೊಳ್ಳಲು ನಾನು ಸಿದ್ಧನಿದ್ದೇನೆ. ಅಶೋಕ್ ಡೇಟ್, ಟೈಮ್ ಫಿಕ್ಸ್ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (D.K Shivakumar)  ಸವಾಲು ಹಾಕಿದ್ದಾರೆ.ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದ್ರೂ, ಏನಾದ್ರು ಪ್ರಚಾರ ಮಾಡ್ಲಿ. ನಮ್ಮದು ಕಾಂಗ್ರೆಸ್ (Congress) ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ. ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆ ದಮನ ಮಾಡಿದ್ದೇವೆ. ಭಯೋತ್ಪಾದನೆ ನಿಯಂತ್ರಿಸಲಾಗದ ಸರ್ಕಾರ ವಜಾ ಮಾಡಿದ್ದೇವೆ. ಮಂಗಳೂರು ಭಯೋತ್ಪಾದಕ ದಾಳಿಯನ್ನು ಖಂಡಿಸಿದ್ದೀವಿ. ಯುವಕನಿಗೆ ಪ್ರಜ್ಞೆ ಬರೋವರೆಗೆ ಏನೂ ಹೇಳಕ್ಕೆ ಆಗಲ್ಲಾ ಅಂತಾ ಪೊಲೀಸ್ ಕಮೀಷನರ್ ಹೇಳಿದ್ರು. ಮಂಗಳೂರು ಪೊಲೀಸರು ಹಿನ್ನೆಲೆ ತಿಳ್ಕೊಬೇಕು ಅಂತಾ ಮೊದಲು ಹೇಳಿಕೆ ಕೊಟ್ರು. ಆದರೆ ಡಿಜಿಪಿ ಘಟನೆಗೆ ಭಯೋತ್ಪಾದನೆಯ ನೆಪ ಕೊಟ್ರು. ಬಿಜೆಪಿಯ (BJP) ಭ್ರಷ್ಟಾಚಾರ, ಮತಗಳ್ಳತನ, ಬೋಗಸ್ ವೋಟರ್ ಸೃಷ್ಟಿಯನ್ನು ಮುಚ್ಚುವ ಯತ್ನವಿದು. ಬಿಜೆಪಿ ಭ್ರಷ್ಟಾಚಾರ ಮುಚ್ಚಿಕೊಳ್ಳಲಿಕ್ಕೆ ಕುಕ್ಕರ್ ಬ್ಲಾಸ್ಟ್ ಪ್ರಕರಣ ಮುಂದೆ ತಂದಿದ್ದಾರೆ. ಹೋಮ್ ಮಿನಿಸ್ಟರ್ ಈ ವಿಷಯವನ್ನು ರಾಜಕಾರಣ ಮಾಡುತ್ತಿದ್ದಾರೆ. ಎಂದು ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: 13 ಕೋಟಿ ರೂ. ಖರ್ಚು ಮಾಡಿ ಕಟ್ಟಿದ ಬ್ರಿಡ್ಜ್ ಉದ್ಘಾಟನೆಗೂ ಮುನ್ನ ಢಮಾರ್!ಸಿದ್ದರಾಮಯ್ಯ (Siddaramaiah) ಬಸ್ ಯಾತ್ರೆಗೆ ಕಂಡೀಷನ್ ಹಾಕಿದ್ದಾರೆ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಸ್‍ನಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ಯಾತ್ರೆ ಪ್ರಾರಂಭವಾಗುತ್ತೆ. ಮಹದಾಯಿ ವಿಚಾರದಲ್ಲಿ ಜನವರಿ 2 ರಂದು ಹುಬ್ಬಳ್ಳಿಯಲ್ಲಿ ಹೋರಾಟ ಸಮಾವೇಶ ಮಾಡುತ್ತೇವೆ. ಯಾರೂ ಕಂಡೀಷನ್ ಹಾಕಲ್ಲ. ಪಕ್ಷದ ತೀರ್ಮಾನವೇ ಅಂತಿಮ. ಪ್ರತಿ ವಿಚಾರದಲ್ಲೂ ಸಿದ್ದರಾಮಯ್ಯ, ಹರಿಪ್ರಸಾದ್ ಸೇರಿದಂತೆ ಕಾರ್ಯಾಧ್ಯಕ್ಷರ ಜೊತೆಗೆ ಚರ್ಚಿಸುತ್ತಿದ್ದೇನೆ. ಈ ಬಾರಿ ಗೆಲ್ಲುವವರಿಗೆ ಪಕ್ಷ ಟಿಕೆಟ್ ಕೊಡುತ್ತೆ. ಕಷ್ಟ ಕಾಲದಲ್ಲಿ ನಮ್ಮೊಂದಿಗೆ ಇದ್ದವರಿಗೆ ಟಿಕೆಟ್ ಕೊಡುತ್ತೇವೆ. ಸಿದ್ದರಾಮಯ್ಯ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡುತ್ತಿದ್ದಾರೆ ಎನ್ನುವ ವಿಚಾರವಾಗಿ ಮಾತನಾಡಿ, ಸುರ್ಜೇವಾಲ್ ಜೊತೆ ಇವತ್ತು ಆ ಎಲ್ಲಾ ವಿಷಯಗಳ ಚರ್ಚೆಯಾಗುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಜಾತಿ ಆಧಾರದಲ್ಲಿ ಸಿಎಂ ಆಯ್ಕೆ ಮಾಡಲ್ಲ- ಜಿ.ಪರಮೇಶ್ವರ್
Sign in to your account
Username or Email Address


Password

 Remember Me


