ಬೆಂಗಳೂರು: ಸೆಕ್ಯುರಿಟಿ ಗಾರ್ಡ್‌ (Security Guard) ಹತ್ಯೆ ಮಾಡಿ ಮನೆಯೊಂದರಲ್ಲಿ ದರೋಡೆ (Robbery) ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.ಬೆಂಗಳೂರಿನ (Bengaluru) ಕೋರಮಂಗಲದ 6ನೇ ಬ್ಲಾಕ್‌ನಲ್ಲಿ ಘಟನೆ ನಡೆದಿದೆ. ಅಸ್ಸಾಂ ಮೂಲದ 45 ವರ್ಷದ ಕರಿಯಪ್ಪ, ಸೆಕ್ಯುರಿಟಿ ಗಾರ್ಡ್ ಕೊಲೆಯಾದ ದುರ್ದೈವಿ. ಮತ್ತೊಬ್ಬ ಸೆಕ್ಯುರಿಟಿ ಬಹದ್ದೂರ್‌ನಿಂದ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಬಹದ್ದೂರ್‌ ನಾಪತ್ತೆಯಾಗಿದ್ದಾನೆ. ಇದನ್ನೂ ಓದಿ: ಪಕ್ಕದ ಮನೆಯವರ ಕೋಳಿಗಳು ಕೂಗೋದ್ರಿಂದ ನಿದ್ರೆ ಮಾಡೋಕಾಗ್ತಿಲ್ಲ – ಬೆಂಗಳೂರು ಪೊಲೀಸರಿಗೆ ವ್ಯಕ್ತಿ ದೂರುಕಂಟ್ರಾಕ್ಟರ್‌ ರಾಜಶೇಖರ ರೆಡ್ಡಿ ಎಂಬವರಿಗೆ ಸೇರಿದ ಮನೆಯಲ್ಲಿ ದರೋಡೆಯಾಗಿದೆ. ಮನೆ ಮಾಲೀಕರು ನಿನ್ನೆ ಕುಟುಂಬ ಸಂಬಂಧಿಕರ ಮದುವೆಗೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಮಾತ್ರ ಇದ್ದ. ಈ ವೇಳೆ ಸೆಕ್ಯುರಿಟಿ ಗಾರ್ಡ್‌ನ ಕೊಲೆ ಮಾಡಿ ದುಷ್ಕರ್ಮಿಗಳು ಮನೆಯಲ್ಲಿ ದರೋಡೆ ಮಾಡಿದ್ದಾರೆ.ಬೆಳಗ್ಗೆ ಇತರೆ ಕೆಲಸಗಾರರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೋರಮಂಗಲ ಪೊಲೀಸರು ಪರಿಶೀಲನೆ ನಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಂಡರ ಹಾವಳಿ – ಮೀನಿನ ಅಂಗಡಿ ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ರೌಡಿ
Sign in to your account
Username or Email Address


Password

 Remember Me


