ಕೊಪ್ಪಳ: ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಹಾಗೂ ನನ್ನ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ನನ್ನ ಹಾಗೂ ಅವರ ನಡುವಿನ ಸಂಬಂಧ ತಂದೆ-ಮಗನ ಸಂಬಂಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದರು.ಕೊಪ್ಪಳದ (Koppal) ಖಾಸಗಿ ವಿಮಾನ ನಿಲ್ದಾಣದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎನ್ನುವುದು ಶುದ್ಧ ಸುಳ್ಳು. ಅವರನ್ನು ಮುಂದಿಟ್ಟುಕೊಂಡೇ ಚುನಾವಣೆಗೆ ಹೋಗುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಪ್ಪಳದಲ್ಲಿ 10 ಜಿಲ್ಲೆಗಳ ಬಿಜೆಪಿ ಕಚೇರಿಗಳನ್ನು ಉದ್ಘಾಟಿಸಿದ ಜೆಪಿ ನಡ್ಡಾಶಾಸಕ ಪ್ರಿಯಾಂಕ್ ಖರ್ಗೆ ಅವರ ಬಿಜೆಪಿ (BJP) ಮನೆಯೊಂದು ಮೂರು ಬಾಗಿಲು ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್‌ಗೆ (Congress) ಬಾಗಿಲು ಇಲ್ಲ, ಕಿಟಕಿಯೂ ಇಲ್ಲ ಎಂದು ತಿರುಗೇಟು ನೀಡಿದರು.ಸಿಎಂ ಜೊತೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು. ಇದನ್ನೂ ಓದಿ: ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ
Sign in to your account
Username or Email Address


Password

 Remember Me


