ಬೆಂಗಳೂರು: ಖಾಸಗಿ ಕಾಲೇಜೊಂದರಲ್ಲಿ ಬಿಎಸ್‌ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ (Student) ನೇಣು ಬಿಗಿದು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಬೆಂಗಳೂರಿನ (Bengaluru) ಸೋಲದೇವನಹಳ್ಳಿಯಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾಗಿರುವ ಯುವತಿಯನ್ನು ಪಶ್ಚಿಮ ಬಂಗಾಳ ಮೂಲದ ರಮಿತಾ ರಾಯ್ ಎಂದು ಗುರುತಿಸಲಾಗಿದೆ. ರಮಿತಾ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ವಾಸವಿದ್ದಳು. ಆಕೆ ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಗೋದ್ರಾ ರೈಲು ದಹನಕಾಂಡ – ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ದೋಷಿಗೆ ಜಾಮೀನು ಯುವತಿ ಪಶ್ಚಿಮ ಬಂಗಾಳ ಮೂಲದವಳಾಗಿರುವುದರಿಂದ ಆಕೆಯ ಪೋಷಕರು ಶುಕ್ರವಾರ ಆಗಮಿಸುವ ಸಾಧ್ಯತೆಯಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೊತ್ತಂಬರಿ ಸೊಪ್ಪಿನೊಳಗೆ ಗಾಂಜಾ ಬೆಳೆದು ಸಿಕ್ಕಿಬಿದ್ದ ಭೂಪ
Sign in to your account
Username or Email Address


Password

 Remember Me


