ಶಿವಮೊಗ್ಗ: ಶಾಲಾ ಪ್ರವಾಸಕ್ಕೆ (School Tour) ಬಂದಿದ್ದ ವಿದ್ಯಾರ್ಥಿಗಳಿದ್ದ (Students)  ಬಸ್ (Bus) ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ ತಾಲೂಕಿನ ತುಮರಿ ಬಳಿ ನಡೆದಿದೆ.ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬಸ್‍ನಲ್ಲಿದ್ದ 18 ಮಕ್ಕಳಿಗೆ ಗಾಯವಾಗಿದ್ದು, 5 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಕಾಮುಕ ಶಿಕ್ಷಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಧರ್ಮದೇಟುಗಾಯಾಳು ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಕಲಿ ಡಾಕ್ಟರ್ ಎಡವಟ್ಟು – ಜ್ವರ ಎಂದು ಹೋದ ಮಹಿಳೆ ಕಾಲಿಗೆ ಗಂಡಾಂತರ
Sign in to your account
Username or Email Address


Password

 Remember Me


