ಬೆಂಗಳೂರು: ಖಾಸಗಿ ಕಾಲೇಜ್ (Collage) ಒಂದರ ಇಂಜಿನಿಯರಿಂಗ್ (Engineering) ವಿದ್ಯಾರ್ಥಿಯೋರ್ವ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಹಾಸ್ಟೆಲ್‍ನ (Hostel) ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಬನ್ನೇರುಘಟ್ಟ ಸಮೀಪದ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ನಿತಿನ್ (19) ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾದ ಕೇರಳ ಮೂಲದ ವಿದ್ಯಾರ್ಥಿ. ನಿತಿನ್ ಇದೇ ತಿಂಗಳು ಡಿ.1ಕ್ಕೆ ಕಾಲೇಜು ಸೇರಿದ್ದ. ಪ್ರಥಮ ವರ್ಷದ ಇಂಜಿನಿಯರಿಂಗ್ ಪದವಿಗೆ ಅಡ್ಮಿಷನ್ ಮಾಡಿಸಿದ್ದ ನಿತಿನ್ ಚಾಕುವಿನಿಂದ ತಾನೇ ಚುಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ವಿದ್ಯಾರ್ಥಿಗಳಿದ್ದ ಶಾಲಾ ಪ್ರವಾಸದ ಬಸ್ ಪಲ್ಟಿ – 18 ಮಕ್ಕಳಿಗೆ ಗಾಯಕಾಲೇಜ್ ಕ್ಯಾಂಪಸ್ ಒಳಗಿನ ಹಾಸ್ಟೆಲ್‍ನಲ್ಲಿ ವಾಸವಿದ್ದ ನಿತಿನ್ ನಿನ್ನೆ ಮಧ್ಯಾಹ್ನ ಹಾಸ್ಟೆಲ್ ಕೊಠಡಿಯ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಹಾಸ್ಟೆಲ್ ಸಹಪಾಠಿ ಬಂದು ಬಾಗಿಲು ಬಡಿದಿದ್ದ. ಬಾಗಿಲು ತೆಗೆಯದ ಹಿನ್ನೆಲೆ ಹಾಸ್ಟೆಲ್ ವಾರ್ಡನ್‍ಗೆ ವಿಷಯ ತಿಳಿಸಿದ್ದಾನೆ. ಕೂಡಲೇ ವಾರ್ಡನ್ ಹಾಗೂ ಸಿಬ್ಬಂದಿ ಬಂದು ಬಾಗಿಲು ಒಡೆದಿದ್ದಾರೆ. ಆಗ ಕತ್ತು ಕೊಯ್ದ ಸ್ಥಿತಿಯಲ್ಲಿ ಶೌಚಾಲಯದಲ್ಲಿ ನಿತಿನ್ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಕಾಮುಕ ಶಿಕ್ಷಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಧರ್ಮದೇಟು
Sign in to your account
Username or Email Address


Password

 Remember Me


