ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ (KARTET Result ) ಪ್ರಕಟವಾಗಿದೆ.ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ www.schooleducation.kar.nic.in ಭೇಟಿ ನೀಡಿ ಪರಿಶೀಲಿಸಬಹುದು.  ಇದನ್ನೂ ಓದಿ: ತಂದೆಯ ಸಾಧನೆ ಸರಿಗಟ್ಟಿದ ಮಗ – ಮೊದಲ ರಣಜಿ ಪಂದ್ಯದಲ್ಲೇ ಅರ್ಜುನ್‌ ತೆಂಡೂಲ್ಕರ್‌ ಶತಕಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು.ಪತ್ರಿಕೆ 1ರಲ್ಲಿ 20,070 ಅಭ್ಯರ್ಥಿಗಳು ಹಾಗೂಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.@BSBommai— B.C Nagesh (@BCNagesh_bjp) December 14, 2022ಒಟ್ಟು ಅಭ್ಯರ್ಥಿಗಳ ಪೈಕಿ ಪತ್ರಿಕೆ -1 ರಲ್ಲಿ 20,070 ಅಭ್ಯರ್ಥಿಗಳು, ಪತ್ರಿಕೆ 2 ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್‌ ಮಾಡುವ ಮೂಲಕ ತಿಳಿಸಿದ್ದಾರೆ.ಚೆಕ್‌ ಮಾಡುವುದು ಹೇಗೆ?
ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ  KARTET-2022 Results’ ಎಂಬಲ್ಲಿ ಕ್ಲಿಕ್‌ ಮಾಡಿ.  ಈ ಪುಟದಲ್ಲಿ ಪರೀಕ್ಷೆ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್‌ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿಯನ್ನು ನೀಡಿ ‘Submit’ ಬಟನ್‌ ಕ್ಲಿಕ್‌ ಮಾಡಿದಾಗ ಫಲಿತಾಂಶ ಓಪನ್ ಆಗುತ್ತದೆ. ಬಳಿಕ ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದುಕೊಳ್ಳಬಹುದು.
Sign in to your account
Username or Email Address


Password

 Remember Me


