ಮಂಗಳೂರು: ಮಂಗಳೂರು (Mangaluru) ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ (Shariq) ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ.ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ದ ರೂವಾರಿ ಉಗ್ರ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದು, ನಡೆಯುವ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್‍ಐಎ (NIA) ಅಧಿಕಾರಿಗಳು ಇಂದು ವೈದ್ಯರ ಸಮ್ಮತಿಯ ಮೇರೆಗೆ ಶಾರೀಕ್‍ನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.ಘಟನೆಯೇನು?: ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಕುಕ್ಕರ್‌ ಮುಚ್ಚಳ ಶಾರೀಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರೀಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆಯಲ್ಲಿ RBI ಮಾಜಿ ಗವರ್ನರ್‌ ಭಾಗಿಇನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಶಾರಿಕ್ ತಂದಿದ್ದು ಅಂತಿಂಥ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್‍ಗೆ ಇಡೀ ಬಸ್ಸನ್ನೇ ಸ್ಫೋಟಿಸುವ ಪವರ್ ಇತ್ತಂತೆ. 3 ಲೀಟರ್ ಕುಕ್ಕರ್ ತುಂಬಾ ಸ್ಫೋಟಕದ ಜೆಲ್ ತಂದಿದ್ದ. ಡಿಟೋನೇಟರ್ ಕೂಡ ಇದ್ದು ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತಂತೆ, ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೆ ಶಾರ್ಟ್ ಸರ್ಕ್ಯೂಟ್ ಆಗಿ ಜೆಲ್‍ಗೆ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಒಂದ್ವೇಳೆ ಡಿಟೊನೇಟರ್ ಮತ್ತು ಜೆಲ್ ಎರಡೂ ಒಂದೇ ಬಾರಿಗೆ ಸ್ಫೋಟಿಸಿದರೆ ಭಯಾನಕ ಘಟನೆಯೇ ನಡೆದು ಹೋಗ್ತಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ
Sign in to your account
Username or Email Address


Password

 Remember Me


