ಸ್ಯಾಂಡಲ್‌ವುಡ್‌ನಲ್ಲಿ (Sandalwood) ಸಿಕ್ಕಾಪಟ್ಟೆ ಸುದ್ದಿಯಾಗುತ್ತಿರುವ ವಿಚಾರ ಎಂದರೆ ಅಭಿಷೇಕ್ ಅಂಬರೀಶ್ (Abhishek Ambreesh) ಮತ್ತು ಅವಿವಾ (Aviva) ಜೋಡಿಯ ಸುದ್ದಿ. ಇತ್ತೀಚೆಗೆ ಸುಳಿವು ಕೊಡದೇ ಸೈಲೆಂಟ್ ಆಗಿ ಅಭಿಷೇಕ್ ಮತ್ತು ಅವಿವಾ ಎಂಗೇಜ್ ಆಗಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು. ಇದೀಗ ಭಾವಿ ಪತ್ನಿಯ ಫೋಟೋವನ್ನ ನಟ ಅಭಿಷೇಕ್ ಶೇರ್‌ ಮಾಡಿದ್ದಾರೆ.ಇತ್ತೀಚೆಗಷ್ಟೇ ಅಭಿಷೇಕ್ ಮತ್ತು ಅವಿವಾ ಅದ್ದೂರಿಯಾಗಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಿಶ್ಚಿತಾರ್ಥ (Engagement) ಮಾಡಿಕೊಂಡಿದ್ದರು. ಈ ಸಂಭ್ರಮಕ್ಕೆ ಇಡೀ ಸ್ಯಾಂಡಲ್‌ವುಡ್ ಮತ್ತು ರಾಜಕೀಯ ರಂಗ ಸಾಕ್ಷಿಯಾಗಿತ್ತು. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾವಿ ಪತ್ನಿ ಜೊತೆಗಿನ ರೊಮ್ಯಾಂಟಿಕ್ ಫೋಟೋವನ್ನ ಅಭಿಷೇಕ್ ಹಂಚಿಕೊಂಡಿದ್ದಾರೆ. ಚೆಂದದ ಜೋಡಿಯ ಫೋಟೋ ನೋಡ್ತಿದ್ದಂತೆ ಫ್ಯಾನ್ಸ್ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಮಹಾಲಕ್ಷ್ಮಿ ಮದುವೆಗೆ ಶತದಿನೋತ್ಸವ: ಹೆಂಡ್ತಿಗೆ ಹ್ಯಾಪಿ ಕ್ರೆಡಿಟ್ ಕೊಟ್ಟ ರವೀಂದ್ರ  A post shared by Abishek Ambareesh (@abishekambareesh)ಅಂಬಿ ಪುತ್ರ ಅಭಿಷೇಕ್ 2019ಕ್ಕೆ ಅಮರ್ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಭರವಸೆಯ ನಟನಾಗಿ ಎಂಟ್ರಿ ಕೊಟ್ರು. ಈ ಚಿತ್ರದ ಮುಂಚೆಯೇ ಅವಿವಾ ಮತ್ತು ಅಭಿಷೇಕ್ ಗೆಳೆತನವಿತ್ತು. ಆ ಗೆಳೆತನ ಪ್ರೀತಿಗೆ ತಿರುಗಿ, ಇಂದು ಗುರುಹಿರಿಯರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.5 ವರ್ಷಗಳ ಪ್ರೀತಿಗೆ ಇಂದು ಉಂಗುರ ತೊಡಿಸುವ ಮೂಲಕ ಅಧಿಕೃತ ಮುದ್ರೆ ಒತ್ತಿದ್ದಾರೆ. ತಮ್ಮ ಪ್ರೀತಿಯ ವಿಚಾರವನ್ನ ಎರಡು ಕುಟುಂಬಕ್ಕೂ ತಿಳಿಸಿ, ಒಪ್ಪಿಗೆ ಮೇರೆಗೆ ಇಂದು ಈ ಜೋಡಿ ಎಂಗೇಜ್ ಆಗಿದ್ದಾರೆ. ಸದ್ಯ ಈ ಜೋಡಿಯ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.
Sign in to your account
Username or Email Address


Password

 Remember Me


