ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಅನೇಕ ಬಾರಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಮೊದಲ ಸಿನಿಮಾ `ಕಿರಿಕ್ ಪಾರ್ಟಿ’ (Kirik Party) ಚಿತ್ರದ ನಿರ್ಮಾಣ ಸಂಸ್ಥೆ ಹೆಸರು ಹೇಳಿಲ್ಲ ಅಂತಾ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ರಶ್ಮಿಕಾ ಸಿನಿಮಾವನ್ನ ಕರ್ನಾಟಕದಲ್ಲಿ ಬ್ಯಾನ್ (Ban) ಮಾಡಲೇಬೇಕು ಅಂತಾ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಪಟ್ಟು ಹಿಡಿದಿದ್ದರು. ಇದೀಗ ರಶ್ಮಿಕಾ ಬ್ಯಾನ್ ಬಗ್ಗೆ ನಟ ಶಿವರಾಜ್‌ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ಕಿರಿಕ್ ಬ್ಯೂಟಿ ರಶ್ಮಿಕಾ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚ್ತಿದ್ದಾರೆ. ತಾವು ಹತ್ತಿದ ಏಣಿಯನ್ನೇ ನಟಿ ಮರೆತಿದ್ದಾರೆ ಎಂದು ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನೂ ತಮ್ಮ ಸಿನಿಮಾ ಪ್ರೆಸ್ ಮೀಟ್‌ವೊಂದರಲ್ಲಿ ನಟ ಶಿವರಾಜ್‌ಕುಮಾರ್‌ಗೆ (Shivarajkumar) ಕರ್ನಾಟಕದಲ್ಲಿ ರಶ್ಮಿಕಾರನ್ನ ಬ್ಯಾನ್ ಮಾಡುವ ಬಗ್ಗೆ ಕೇಳಲಾಗಿದೆ. ಈ ಕುರಿತು ಶಿವಣ್ಣ ಕೂಡ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸ್ಲಿಮ್ ಆಗಿ ಹೊಸ ಲುಕ್‌ನಲ್ಲಿ ಮಿಂಚಿದ ವಿಜಯ್ ಸೇತುಪತಿನನಗೆ ಈ ಬಗ್ಗೆ ಗೊತ್ತಿಲ್ಲ. ಅವರ ಸಿನಿಮಾ ಚೆನ್ನಾಗಿ ಹೋಗುತ್ತೀದೆಯಾ? ಅದನ್ನ ಅಷ್ಟೇ ನೋಡುತ್ತೇನೆ. ಕಾಂಟ್ರವರ್ಸಿಗಳ ಕಡೆ ನಾನು ಗಮನ ಕೊಡುವುದಿಲ್ಲ ಎಂದು ನಟ ಶಿವಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.ಸದ್ಯ ರಶ್ಮಿಕಾ ʻಪುಷ್ಪ 2ʼ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ನಟಿಯ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ.
Sign in to your account
Username or Email Address


Password

 Remember Me


