ಬೆಂಗಳೂರು: ಗಜರಾತ್ ಚುನಾವಣೆ ಬಳಿಕ ಬಿಜೆಪಿ (BJP) ಹೈಕಮಾಂಡ್ ಚಿತ್ತ ಕರ್ನಾಟಕ ಚುನಾವಣೆಯತ್ತ (Karnataka election) ಹರಿದಿದೆ. ರಾಜ್ಯದಲ್ಲಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಹೈಕಮಾಂಡ್ ನಾಯಕರ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 15ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಕೊಪ್ಪಳಕ್ಕೆ (Koppal) ಬರುತ್ತಿದ್ದು, 10 ಜಿಲ್ಲಾ ಬಿಜೆಪಿ ನೂತನ ಕಾರ್ಯಾಲಯಗಳನ್ನು ಉದ್ಘಾಟಿಸಲಿದ್ದಾರೆ.ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯು ಡಿಸೆಂಬರ್ 15ರಂದು ನಡೆಯಲಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ವಿಜಯಪುರ, ಬಾಗಲಕೋಟೆ, ಕೋಲಾರ, ಚಾಮರಾಜನಗರ, ಹಾವೇರಿ ಮತ್ತು ಗದಗದಲ್ಲಿ ನಿರ್ಮಿಸಿದ ನೂತನ ಕಾರ್ಯಾಲಯಗಳನ್ನು ಕೊಪ್ಪಳದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಉದ್ಘಾಟಿಸಲಿದ್ದಾರೆ.ವಿಜಯನಗರ, ಕೊಡಗು ಮತ್ತು ಉತ್ತರಕನ್ನಡ ಜಿಲ್ಲಾ ಕಟ್ಟಡಗಳಿಗೆ ಅವರು ಶಿಲಾನ್ಯಾಸ ನೆರವೇರಿಸಲಿದ್ದು, ಬೆಳಗ್ಗೆ ಹೋಮ, ಹವನ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿದೆ. ಕೊಪ್ಪಳ ಜಿಲ್ಲಾ ಕಾರ್ಯಾಲಯದ ಶಿಲಾಫಲಕ ಅನಾವರಣ ಮಾಡುವ ಮೂಲಕ ಜಿಲ್ಲಾ ಕಾರ್ಯಾಲಯ ಭವನವನ್ನು ಜೆಪಿ ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾಜ್ಯದ ಇತರೆ 9 ಜಿಲ್ಲೆಗಳ ಕಾರ್ಯಾಲಯ ಭವನದ ಉದ್ಘಾಟನೆಯನ್ನು ವರ್ಚುವಲ್ ಮಾಧ್ಯಮದ ಮೂಲಕ ಜೆ.ಪಿ ನಡ್ಡಾ ಅವರು ನೆರವೇರಿಸಲಿದ್ದಾರೆ. ಇದನ್ನೂ ಓದಿ: ರಾಷ್ಟ್ರಗೀತೆ ಹಾಡುವಾಗ ಎದ್ದು ನಿಲ್ಲದ ಕಾಂಗ್ರೆಸ್ ಶಾಸಕ – ಬಿಜೆಪಿಯಿಂದ ಆಕ್ರೋಶನೂತನ ಕಟ್ಟಡದಲ್ಲಿ ಜಿಲ್ಲಾ ಅಧ್ಯಕ್ಷರ ಕೊಠಡಿ, ಗ್ರಂಥಾಲಯ, ಮಾಹಿತಿ ಕೇಂದ್ರ, ಮಾಧ್ಯಮ ಕೊಠಡಿ, ಸಂಸದರು, ಶಾಸಕರು, ಜನಪ್ರತಿನಿಧಿಗಳಿಗೆ ವಿಐಪಿ ಕೊಠಡಿ, ಉಗ್ರಾಣ, ಅಡುಗೆ ಮನೆ, ಊಟದ ಮನೆ, ಪ್ರಶಿಕ್ಷಣ ಮತ್ತು ಸಭೆಗಳಿಗಾಗಿ ಸಭಾಂಗಣ, ಬೋರ್ಡ್ ರೂಮ್/ಕೋರ್ ಕಮಿಟಿ ಸಭಾಂಗಣ, ವಸತಿ ಕೊಠಡಿಗಳು, ಸಾಮೂಹಿಕ ವಸತಿ, ಪಾರ್ಕಿಂಗ್, ಇತ್ಯಾದಿ ವ್ಯವಸ್ಥೆಗಳಿವೆ. ಹೈಸ್ಪೀಡ್ ಇಂಟರ್‌ನೆಟ್ ವ್ಯವಸ್ಥೆ, ವೈ-ಫೈ, ಲಿಫ್ಟ್, ಪವರ್ ಬ್ಯಾಕ್‌ಅಪ್, ಡಿಜಿಟಲ್ ಲೈಬ್ರರಿಗಾಗಿ ವ್ಯವಸ್ಥೆ, ಮಳೆ ನೀರು ಕೊಯ್ಲಿನ ವ್ಯವಸ್ಥೆ, ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್, ಪ್ರಾಕೃತಿಕ ಗಾಳಿ ಮತ್ತು ಬೆಳಕಿನ ವ್ಯವಸ್ಥೆಗನುಗುಣವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ: ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ
Sign in to your account
Username or Email Address


Password

 Remember Me


