ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರ ಮುಖ್ಯ ಚಾಲಕ ರವಿಕುಮಾರ್ ಎಸ್. ಕಾಳೆ ಅವರು ನಿನ್ನೆ ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.ನಿನ್ನೆ ಹುಬ್ಬಳ್ಳಿಯಿಂದ (Hubballi) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ರಾಜ್ಯಪಾಲರನ್ನು ಪಿಕ್ ಮಾಡಲು ತೆರಳಿದ್ದರು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರವಿಕುಮಾರ್‌ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ದೇವನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು. ಇದನ್ನೂ ಓದಿ: ರಾತ್ರಿ 11 ಗಂಟೆ ನಂತ್ರ ಓಡಾಡಿದ್ದಕ್ಕೆ ದಂಪತಿಗೆ ದಂಡ ಹಾಕಿದ್ದ ಪೊಲೀಸರು ಸಸ್ಪೆಂಡ್‌ಥಾವರ್‌ಚಂದ್ ಗೆಹ್ಲೋಟ್ ರಾಜ್ಯಕ್ಕೆ ರಾಜ್ಯಪಾಲರಾಗಿ ಬಂದಾಗಿನಿಂದ ರವಿಕುಮಾರ್ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ರಾಜಭವನದಲ್ಲಿ ರವಿಕುಮಾರ್‌ ಅವರ ಪಾರ್ಥಿವ ಶರೀರಕ್ಕೆ ರಾಜ್ಯಪಾಲರು ಪುಷ್ಪ ನಮನ ಸಲ್ಲಿಸಿದರು.ರಾಜಭವನದ ಅಧಿಕಾರಿಗಳು, ಸಿಬ್ಬಂದಿಗಳು ಅಂತಿಮ ನಮನ ಸಲ್ಲಿಸಿದರು. ರವಿಕುಮಾರ್ ಕಾಳೆ ಅವರಿಗೆ 42 ವಯಸ್ಸಾಗಿದ್ದು, ಸುಮಾರು 16 ವರ್ಷ ಸೇವಾ ಅನುಭವ ಹೊಂದಿದ್ದರು. ಅವರ ಅಂತ್ಯಸಂಸ್ಕಾರ ಧಾರವಾಡದ ಸ್ವಗ್ರಾಮದಲ್ಲಿ ನಡೆಯಲಿದೆ. ಇದನ್ನೂ ಓದಿ: ಅಂಬೇಡ್ಕರ್‌ಗೆ ಅಪಮಾನ – ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ ಮುಖಕ್ಕೆ ಮಸಿ ಬಳಿದು ಆಕ್ರೋಶ
Sign in to your account
Username or Email Address


Password

 Remember Me


