ಶಿವಮೊಗ್ಗ: ಲಾರಿ (Lorry) ಹಾಗೂ ಕಾರಿನ (Car) ನಡುವೆ ಭೀಕರ ಅಪಘಾತ (Accident) ನಡೆದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಮೃತರನ್ನು ದಾವಣಗೆರೆ ಮೂಲದ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳಾದ ಕಾರ್ತಿಕ್, ವಿವೇಕ್, ಮೋಹನ್ ಎಂದು ಗುರುತಿಸಲಾಗಿದ್ದು, ರುದ್ರೇಶ್ ಪಾಟೀಲ್ ಎಂಬುವರಿಗೆ ಗಂಭೀರ ಗಾಯಗಳಾಗಿದೆ. ರುದ್ರೇಶ್ ಪಾಟೀಲ್‌ಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ (Shivamogga) ಕಲ್ಲುಕೊಪ್ಪ ಬಳಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕಿರುಕುಳ ವಿರೋಧಿಸಿದ್ದಕ್ಕೆ ತಾಯಿ ಮಗುವನ್ನು ಹೊರದೂಡಿದ ಕ್ಯಾಬ್ ಚಾಲಕ- ಮಗು ಸಾವುಶಿವಮೊಗ್ಗದಿಂದ ದಾವಣಗೆರೆ ಕಡೆ ಕಾರು ತೆರಳುತ್ತಿತ್ತು. ಈ ವೇಳೆ ಕಾರು ಹಾಗೂ ಶಿವಮೊಗ್ಗಕ್ಕೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತವಾಗಿದೆ. ಘಟನೆ ವೇಳೆ ಕಾರು ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಘಟನೆ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಹಿಂದೂ ಕಾರ್ಯಕರ್ತನಿಗೆ ಬೆದರಿಕೆ ಆರೋಪ – ಸರ್ಕಲ್‌ ಇನ್‌ಸ್ಪೆಕ್ಟರ್‌ ಸೇರಿ 7 ಮಂದಿ ವಿರುದ್ಧ FIR
Sign in to your account
Username or Email Address


Password

 Remember Me


