ಮಂಡ್ಯ: ಕಳ್ಳರ (Theif) ಹೆಡೆಮುರಿ ಕಟ್ಟುವ ಪೊಲೀಸರ (Police) ಮನೆಗೆ ಖತರ್ನಾಕ್ ಕಳ್ಳನೊಬ್ಬ ಕನ್ನ ಹಾಕಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಹುಲಿಕೆರೆ ಗ್ರಾಮದ ರವಿ ಎಂಬುವವರು ತಮ್ಮ ಪತ್ನಿಯೊಂದಿಗೆ ಮೈಸೂರಿನ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಪೊಲೀಸಪ್ಪ ರವಿ ಮನೆಗೆ ಎಂಟ್ರಿ ಕೊಟ್ಟಿರುವ ಖತರ್ನಾಕ್ ಕಳ್ಳರು ಮನೆ ಬೀಗ ಮುರಿದು ಬೀರುವಿನಲ್ಲಿದ್ದ 95 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಪುಟ್ಟರಾಜು ಎಚ್ಚರಿಕೆಯ ಬೆನ್ನಲ್ಲೇ ಪ್ರತಾಪ್ ಸಿಂಹ ರಸ್ತೆ ವೀಕ್ಷಣೆಆಸ್ಪತ್ರೆಯಿಂದ ವಾಪಸ್ಸು ಮನೆಗೆ ಬಂದಾಗ ಕಳ್ಳತನ ಮಾಡಿರೋದು ಬೆಳಕಿಗೆ ಬಂದಿದ್ದು, ಕೆ.ಆರ್.ಎಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಂತರ ಸ್ಥಳಕ್ಕಾಗಿಮಿಸಿದ ಕೆ.ಆರ್.ಎಸ್ ಠಾಣೆಯ ಪಿಎಸ್ಐ ಪುನೀತ್ ನೇತೃತ್ವದ ತಂಡ ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದ್ದು, ಕಳ್ಳರ ಸೆರೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ನಾನೂ ಗೂಂಡಾಗಿರಿ ಮಾಡ್ತಿದ್ದೆ, ಜೀನ್ಸ್ ಪ್ಯಾಂಟ್ ಹಾಕ್ಕೊಂಡ್ರೆ ಹುಡ್ಗೀರೆಲ್ಲಾ ನನ್ನೇ ನೋಡ್ತಿದ್ರು: ಶ್ರೀರಾಮುಲು
Sign in to your account
Username or Email Address


Password

 Remember Me


