ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೈಕೋಪಾತ್ ಮಾದಕವ್ಯಸನಿ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ (Video) ಚಿತ್ರೀಕರಿಸಿ ವಿಕೃತಿ ಮೆರೆದ ಪ್ರಸಂಗವೊಂದು ಬೆಳಕಿಗೆ ಬಂದಿದೆ.ಸೈಕೋವನ್ನು ಸಂಪಿಗೆಹಳ್ಳಿ (Sampigehalli) ನಿವಾಸಿ ಜಾನ್ ಪಾಲ್ ಎಂದು ಗುರುತಿಸಲಾಗಿದೆ. ಈತನನ್ನು ಮಹಿಳಾ ಟೆಕ್ಕಿ (Woman Techie) ಯೊಬ್ಬರು 2011ರ ಏಪ್ರಿಲ್‍ನಲ್ಲಿ ವಿವಾಹವಾಗಿದ್ದಾರೆ.2015 ರಿಂದ ತನ್ನ ವಿಕೃತಿ ಶುರು ಮಾಡಿದ್ದ ಆರೋಪಿ ಪತಿ ಜಾನ್‍ಪಾಲ್, ಮನೆಗೆ ತನ್ನ ಗೆಳೆಯರನ್ನ ಕರೆದು ಪಾರ್ಟಿ ಮಾಡಿ ನಂತರ ಗೆಳೆಯರೊಂದಿಗೆ ಬೆಡ್ ಶೇರ್ ಮಾಡು ಎಂದು ಒತ್ತಾಯಿಸುತ್ತಿದ್ದ. ಪತಿಯ ಹಲ್ಲೆಯಿಂದ ತಾಳಲಾರದೇ ಆತನ ಗೆಳೆಯರೊಂದಿಗೆ ಮಹಿಳಾ ಟೆಕ್ಕಿ ದೈಹಿಕ ಸಂಪರ್ಕಕ್ಕೆ ಒಪ್ಪಿಗೆ ಸೂಚಿಸುತ್ತಿದ್ದರು. ಇದನ್ನೂ ಓದಿ: ಹಾದಿ ಬೀದಿಯಲ್ಲಿ ಹುಡುಗಿಯರನ್ನ ರೇಗಿಸಿದ್ರೆ 2 ವರ್ಷ ಜೈಲು..!ತನ್ನ ಸ್ನೇಹಿತರಾದ ಸಜೀಶ್ ಹಾಗೂ ನಾಜಿ ಎಂಬವರ ಜೊತೆ ತನ್ನ ಪತ್ನಿಯನ್ನ ಮಲಗಿಸುತ್ತಿದ್ದನು. ಅಲ್ಲದೆ ಮಲಗಿದ ಫೋಟೋ ಹಾಗೂ ವೀಡಿಯೋಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುವ ಮೂಲಕ ವಿಕೃತಿ ಮೆರೆಯುತ್ತಿದ್ದನು. ಪತ್ನಿಯ ಮೇಲೆ ವಿಕೃತಿ ಮೆರೆದಿದ್ದಲ್ಲದೇ ಪತ್ನಿಯ ತಂಗಿಯನ್ನು ತನ್ನೊಡನೆ ಮಲಗುವಂತೆ ಕಿರುಕುಳ ನೀಡಿದ್ದಾನೆ.ಗಂಡನ ಕಿರುಕುಳಕ್ಕೆ ಬೇಸತ್ತು ಇದೀಗ ಮಹಿಳಾ ಟೆಕ್ಕಿ ವಿಚ್ಛೇದನ ನೀಡಲು ಮುಂದಗಿದ್ದಾರೆ. ಈ ವೇಳೆ ಪತ್ನಿ ತನ್ನ ಗೆಳೆಯರೊಂದಿಗಿನ ಅಶ್ಲೀಲ ಫೋಟೋ ವೀಡಿಯೋ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ. ನೊಂದ ಪತ್ನಿ ಸಂಪಿಗೆಹಳ್ಳಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ಸೈಕೋಪಾತ್ ಜಾನ್ ಪಾಲ್ ಗಾಂಜಾ ವ್ಯಸನಿಯಾಗಿದ್ದು, ಮನೆಯಲ್ಲಿಯೇ ಗಾಂಜಾ ಸಸಿಗಳನ್ನ ಫಾಟ್ ಗಳಲ್ಲಿ ಬೆಳೆದಿದ್ದಾನೆಂದು ದೂರಿನಲ್ಲಿ ತಿಳಿಸಿದ್ದಾರೆ.ದೂರಿನನ್ವಯ ಲೈಂಗಿಕ ಕಿರುಕುಳ, ಎನ್.ಡಿ.ಪಿ.ಎಸ್ ಹಾಗೂ ಐಟಿ ಆಕ್ಟ್ ಅಡಿ ಕೇಸ್ ದಾಖಲು ಮಾಡಲಾಗಿದೆ.
Sign in to your account
Username or Email Address


Password

 Remember Me


