ಮಡಿಕೇರಿ: ಏಪ್ರಿಲ್ 23 ಅಥವಾ ಮೇ ಮೊದಲ ವಾರದಲ್ಲಿ ಕರ್ನಾಟಕ ಚುನಾವಣೆ (Karnataka Election) ನಡೆಯುತ್ತದೆ ಎಂದು ರಾಜ್ಯ ಚುನಾವಣೆ ಬಗ್ಗೆ ಮಾಜಿ ಸ್ಪೀಕರ್, ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ (KG Bopaiah) ಸುಳಿವು ನೀಡಿದರು.ಗುಜರಾತ್ ಚುನಾವಣೆ (Gujarat Election) ಮುಗಿದ ಬಳಿಕ ಕರ್ನಾಟಕದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯ ಚುನಾವಣೆ ಬಗ್ಗೆ ಮಡಿಕೇರಿಯಲ್ಲಿ (Madikeri) ‌ಮಾತನಾಡಿದ ಅವರು‌, ಏಪ್ರಿಲ್ 23 ಅಥವಾ ಮೇ ಮೊದಲ ವಾರದಲ್ಲಿ ಎಲೆಕ್ಷನ್ ಇದೆ. ನಮಗೆ ಮೊದಲೇ ಗೊತ್ತಿತ್ತು. ಹೀಗಾಗಿ ಕೊಡಗು ಜಿಲ್ಲೆಯಲ್ಲೂ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ಪಕ್ಷ ಚುನಾವಣೆಗೆ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಸನ್ನದ್ಧವಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವಥ್‌ ನಾರಾಯಣ ಚಾಲನೆಗುಜರಾತ್ (Gujarat ) ಮಾದರಿಯಲ್ಲಿ ರಾಜ್ಯದಲ್ಲೂ ಹೊಸ ಮುಖಗಳಿಗೆ ಆದ್ಯತೆ ನೀಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಅದು ಪಕ್ಷದ ನಿರ್ಧಾರ ಇದರ ಬಗ್ಗೆ ಹೆಚ್ಚು ಮಾತಾನಾಡುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಆ್ಯಕ್ಟಿವ್ ಇದ್ದಾರೆ, ರಾತ್ರಿ-ಹಗಲು ಪಕ್ಷಕ್ಕಾಗಿ ಕೆಲಸ ಮಾಡ್ತಿದ್ದಾರೆ: ಸತೀಶ್ ಜಾರಕಿಹೊಳಿ
Sign in to your account
Username or Email Address


Password

 Remember Me


