ಹಾವೇರಿ: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿನ್ನೆ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆ ಸಿಪಿಐ ರವಿ ಉಕ್ಕುಂದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಅರಳೀಕಟ್ಟಿ ಗ್ರಾಮದಲ್ಲಿ ನಡೆಯಿತು.ನಿನ್ನೆ ಕಾರಿನಲ್ಲಿ ಸಿಂದಗಿಯಿಂದ ಪತ್ನಿಯೊಂದಿಗೆ ಕಲಬುರಗಿಗೆ ಹೊರಟಿದ್ದರು. ಈ ವೇಳೆ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ ಮತ್ತು ಅವರ ಪತ್ನಿ ಮಧು ಮೃತಪಟ್ಟಿದ್ದರು. ಸುಮಾರು 6 ವರ್ಷಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸಿ ಪ್ರಸ್ತುತ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯ ಸಿಪಿಐ ಆಗಿ ರವಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಗುಜರಾತ್‌ ಚುನಾವಣೆ – AAP ಸಿಎಂ ಅಭ್ಯರ್ಥಿಗೆ ಸೋಲುಸಿಪಿಐ ರವಿ ಸಾವಿಗೆ ಅರಳೀಕಟ್ಟಿ, ಕೊಪ್ಪಳ, ವಿಜಯಪುರ ಜಿಲ್ಲೆಯ ಜನರು ಕಂಬನಿ ಮಿಡಿದಿದ್ದಾರೆ. ಮೃತ ದಂಪತಿಯ ಅಂತ್ಯಕ್ರಿಯೆ ಅರಳೀಕಟ್ಟಿ ಗ್ರಾಮದಲ್ಲಿ ನಡೆಯಿತು. ಮೃತ ದಂಪತಿಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಇನ್ನೂ ಚಿಕ್ಕ ವಯಸ್ಸಿನಲ್ಲಿರುವ ಇಬ್ಬರು ಮಕ್ಕಳನ್ನು ಬಿಟ್ಟು ಸಿಪಿಐ ರವಿ ಮತ್ತು ಅವರ ಪತ್ನಿ ಮಧು ಬಾರದ ಲೋಕಕ್ಕೆ ತೆರಳಿದ್ದಕ್ಕೆ ನೆರೆದಿದ್ದ ಜನ ಕಂಬನಿ ಮಿಡಿದರು. ಇದನ್ನೂ ಓದಿ: 1 ತಿಂಗಳ ಹಿಂದೆ ಪಿಯೂಷ್ ಗೋಯಲ್ ಹೇಳಿದ್ದ ಭವಿಷ್ಯ ನಿಜವಾಯ್ತು – ವೀಡಿಯೋ ವೈರಲ್
Sign in to your account
Username or Email Address


Password

 Remember Me


