ಹಾಸನ: ಪೊಲೀಸ್ (Police) ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ (Helmet) ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ (Hariram Shankar) ಖಡಕ್ ಎಚ್ಚರಿಕೆ ನೀಡಿದ್ದಾರೆ.ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಾಸನ ಎಸ್‍ಪಿ (SP) ಎಚ್ಚರಿಕೆ ನೀಡಿದ್ದಾರೆ. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕು. ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಹಾಗೂ ಸಂಚಾರಿ ನಿಯಮ ಪಾಲನೆ ಮಾಡದ ವಾಹನ ಸವಾರರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವುದು ಸಹ ಪೊಲೀಸರ ಕರ್ತವ್ಯ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆಲ್ಮೆಟ್‌ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸರು – ಹಿಗ್ಗಾಮುಗ್ಗ ಕ್ಲಾಸ್‌ ತೆಗೆದುಕೊಂಡ ಮಹಿಳೆಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ಪೊಲೀಸರೇ ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ಪೊಲೀಸ್ ಅಧಿಕಾರಿ ಅಥವಾ ಸಿಬ್ಬಂದಿ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುವುದು ಕಂಡುಬಂದಲ್ಲಿ ಸಂಚಾರಿ ನಿಯಮದ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಹೆಲ್ಮೆಟ್ ಧರಿಸದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸರಿಗೆ ಹರಿರಾಂ ಶಂಕರ್ ಸೂಚಸಿದ್ದಾರೆ. ಇದನ್ನೂ ಓದಿ: ಕುಡುಕನಿಗೆ ಸಿಕ್ಕಿದ ಹತ್ತು ಲಕ್ಷ ರೂ. ಪೊಲೀಸರ ಪಾಲಾಯ್ತಾ? – 10 ಲಕ್ಷ, ಹತ್ತೇ ನಿಮಿಷದಲ್ಲಿ ಮಂಗಮಾಯ
Sign in to your account
Username or Email Address


Password

 Remember Me


