ಬೆಂಗಳೂರು : 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿಶ್ವಾಸ ವ್ಯಕ್ತಪಡಿಸಿದರು.ಗುಜರಾತ್ (Gujarat) ಮತ್ತು ಹಿಮಾಚಲ ಪ್ರದೇಶದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಜಯ ಎಂಬ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನರು ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಲಿದ್ದಾರೆ. ಜನರು ಸುಳ್ಳು ಆರೋಪಗಳು ಹಾಗೂ ರಾಜಕೀಯ ಆರೋಪಗಳಿಗೆ ಬೆಲೆ ಕೊಡುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ – ರಸ್ತೆಯುದ್ದಕ್ಕೂ ಮೊಳೆಗಳನ್ನು ಹಾಕಿದ ಕಿಡಿಗೇಡಿಗಳುಎರಡು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಇಡೀ ಭಾರತ, ವಿಶ್ವ ಬೆಂಬಲ ಕೊಡುತ್ತಿದೆ. ಹೀಗಾಗಿ ಗುಜರಾತ್‌ನಲ್ಲಿ 7ನೇ ಬಾರಿ ಗೆಲುವು ಸಾಧಿಸುತ್ತಿದ್ದೇವೆ ಎಂದರು. ಈ ಚುನಾವಣೆ (Election) ಫಲಿತಾಂಶ ಮುಂಬರುವ ಕರ್ನಾಟಕ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ ಅಂತ ಭವಿಷ್ಯ ನುಡಿದರು. ಇದನ್ನೂ ಓದಿ:  ಗಡಿ ವಿವಾದ ಜೀವಂತವಾಗಿಡಲು ಮಹಾರಾಷ್ಟ್ರ ಪುಂಡಾಟಿಕೆ ಮಾಡುತ್ತಿದೆ: ಸಿದ್ದರಾಮಯ್ಯ
Sign in to your account
Username or Email Address


Password

 Remember Me


