ಬೆಂಗಳೂರು: ಎರಡೂ ರಾಜ್ಯಗಳಲ್ಲೂ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ಸಿಎಂ ಬೊಮ್ಮಾಯಿ(Basavaraj Bommai) ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ(Eknath Shinde) ಪರಸ್ಪರ ಚರ್ಚೆ ನಡೆಸಿದ್ದಾರೆ.ಬೆಳಗಾವಿಯಲ್ಲಿ ಕರ್ನಾಟಕ, ಮಹಾರಾಷ್ಟ್ರ(Maharashtra-Karnataka border row) ಮಧ್ಯೆ ಗಡಿ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಮಂಗಳವಾರ ರಾತ್ರಿ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ತಾಳ್ಮೆ ಪರೀಕ್ಷಿಸಬೇಡಿ – ಕರ್ನಾಟಕಕ್ಕೆ ಪವಾರ್‌ ಎಚ್ಚರಿಕೆ ಈ ಬಗ್ಗೆ ಟ್ವೀಟ್‌ ಮಾಡಿರುವ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಎರಡೂ ರಾಜ್ಯಗಳಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.Since there is harmonious relation between the people of both the states, however there is no change in our stand as far as Karnataka border is concerned. And the legal battle will be pursued in Supreme court.2/2— Basavaraj S Bommai (@BSBommai) December 6, 2022ಎರಡೂ ರಾಜ್ಯಗಳ ಜನರ ನಡುವೆ ಸೌಹಾರ್ದಯುತ ಬಾಂಧವ್ಯ ಇರುವುದರಿಂದ ಕರ್ನಾಟಕದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
Sign in to your account
Username or Email Address


Password

 Remember Me


