ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಿರ್ದೇಶಕ ಭಗವಾನ್ (Director Bhagavan) ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲುನಟ,ನಿರ್ದೇಶಕ, ನಿರ್ಮಾಪಕನಾಗಿ ಕನ್ನಡ ಚಿತ್ರರಂಗದಲ್ಲಿ ಭಗವಾನ್ ಗುರುತಿಸಿಕೊಂಡಿದ್ದರು. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 89 ವರ್ಷದ ಭಗವಾನ್ ಅವರು ಇತ್ತೀಚೆಗೆ ಶೀತದಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ 2 ದಿನದ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.  ಡಾ.ಮಂಜುನಾಥ್‌ ಅವರು ಭಗವಾನ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ.1966ರಲ್ಲಿ ʻಸಂಧ್ಯಾರಾಗʼ ಸಿನಿಮಾ ಮೂಲಕ ಸಹಾಯಕ ನಿರ್ದೇಶಕರಾಗಿ ಭಗವಾನ್ ಚಿತ್ರರಂಗ ಪ್ರವೇಶಿಸಿದ್ದರು. ಬಳಿಕ ದೊರೈರಾಜ್ ಅವರ ಜೊತೆಗೂಡಿ ಸಾಕಷ್ಟು ಸಿನಿಮಾಗಳನ್ನ ನಿರ್ದೇಶನ ಮಾಡಿದ್ದರು.
Sign in to your account
Username or Email Address


Password

 Remember Me


