ಬೆಂಗಳೂರು: ಗಡಿ ವಿವಾದವನ್ನು ಜೀವಂತವಾಗಿ ಇಡಲು ಮಹಾರಾಷ್ಟ್ರ (Maharashtra) ಗಡಿ ಕ್ಯಾತೆ ತೆಗೆಯುತ್ತಿದೆ ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಆಕ್ರೋಶ ಹೊರ ಹಾಕಿದ್ದಾರೆ.ಬೆಳಗಾವಿ (Belagavi) ಗಡಿ ವಿವಾದದ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಡಿ ಭಾಗದ ವಿವಾದವನ್ನು ಜೀವಂತವಾಗಿಡಲು ಮಹಾರಾಷ್ಟ್ರದವರು ಹೀಗೆ ಮಾಡ್ತಿದ್ದಾರೆ. ಗಡಿ ವಿವಾದದಲ್ಲಿ ಮಹಾಜನ್ ವರದಿಯೇ ಅಂತಿಮ. ಈಗಾಗಲೇ ವರದಿ ಬಂದಿದೆ. ಅದನ್ನು ಮಹಾರಾಷ್ಟ್ರದವರು ಒಪ್ಪಲ್ಲ ಅಂದರೆ ಹೇಗೆ? ಮಹಾಜನ್ ಮಹಾರಾಷ್ಟ್ರದವರು. ಅವರು ಕೊಟ್ಟ ವರದಿ ಒಪ್ಪಿಲ್ಲ ಅಂದ್ರೆ ಹೇಗೆ ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ಧರ್ಮದಂಗಲ್: ದೇವಸ್ಥಾನದ ಉತ್ಸವ, ಕಂಬಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರಮಹಾಜನ್ ವರದಿ ಒಪ್ಪಿಲ್ಲ. ಅಂದ್ರೆ ಅದು ಮಹಾರಾಷ್ಟ್ರದವರ ಪುಂಡಾಟಿಕೆ. ನಾವು ಪುಂಡಾಟಿಕೆಗೆ ಹೆದರಬಾರದು. ಸರ್ವ ಪಕ್ಷಗಳ ಸಭೆ ಕರೆಯುತ್ತೇನೆ ಅಂತ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ರು. ಆದರೆ ಇನ್ನು ಸಭೆ ಕರೆದಿಲ್ಲ ಅಂತ ಸಿಎಂ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿ, ಸರ್ಕಾರ ಉತ್ತಮ ಲಾಯರ್‌ಗಳನ್ನು ಇಟ್ಟು ವಾದ ಮಾಡಬೇಕು ಅಂತ ಸಲಹೆ ಕೊಟ್ಟರು. ಇದನ್ನೂ ಓದಿ: ಪೊಲೀಸ್ ಇಲಾಖೆಯಿಂದ ಕನ್ನಡಿಗರ ಹೋರಾಟ ಹತ್ತಿಕ್ಕುವ ಕೆಲಸವನ್ನು ಸರ್ಕಾರ ಮಾಡ್ತಿದೆ: ಕರವೇ ಜಿಲ್ಲಾಧ್ಯಕ್ಷ
Sign in to your account
Username or Email Address


Password

 Remember Me


